ನವದೆಹಲಿ: ಜಿಎಸ್ಟಿ ಕೌನ್ಸಿಲ್ ಶುಕ್ರವಾರ Anti-profiteering authorityಯ ಅಧಿಕಾರಾವಧಿಯನ್ನು ಎರಡು ವರ್ಷಗಳವರೆಗೆ ವಿಸ್ತರಿಸಿದೆ ಮತ್ತು ಗ್ರಾಹಕರಿಗೆ ಜಿಎಸ್ಟಿ ದರ ಕಡಿತದ ಪ್ರಯೋಜನಗಳನ್ನು ವರ್ಗಾಯಿಸದ ಸಂಸ್ಥೆಗಳಿಗೆ ಶೇ 10 ರಷ್ಟು ದಂಡ ವಿಧಿಸಲು ಅನುಮೋದನೆಯನ್ನು ನೀಡಿದೆ.
35 ನೇ ಜಿಎಸ್ಟಿ ಕೌನ್ಸಿಲ್ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಕಂದಾಯ ಕಾರ್ಯದರ್ಶಿ ಎ ಬಿ ಪಾಂಡೆ ಅವರು, ಜಿಎಸ್ಟಿ-ನೆಟ್ವರ್ಕ್ನಲ್ಲಿ ನೋಂದಾಯಿಸಿಕೊಳ್ಳಲು ಆಧಾರ್ ಅನ್ನು ಬಳಸಿಕೊಳ್ಳುವಂತೆ ಉದ್ಯಮಗಳಿಗೆ ಅನುಮತಿ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಅಲ್ಲದೆ, ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಅಡಿಯಲ್ಲಿ ವಾರ್ಷಿಕ ರಿಟರ್ನ್ಸ್ ಸಲ್ಲಿಸುವ ದಿನಾಂಕವನ್ನು ಆಗಸ್ಟ್ 30 ರವರೆಗೆ ಎರಡು ತಿಂಗಳುಗಳ ಕಾಲ ವಿಸ್ತರಿಸಲಾಗಿದೆ ಎಂದು ಹೇಳಿದ ಅವರು, ಒನ್ ಫಾರ್ಮ್ ನ್ಯೂ ಜಿಎಸ್ಟಿ ರಿಟರ್ನ್ ಫೈಲಿಂಗ್ ವ್ಯವಸ್ಥೆಯು 2020 ರ ಜನವರಿ 1 ರಿಂದ ಅನ್ವಯವಾಗಲಿದೆ ಎಂದರು.
ಕೇಂದ್ರ ಹಣಕಾಸು ಸಚಿವರ ನೇತೃತ್ವ ಮತ್ತು ಎಲ್ಲಾ ರಾಜ್ಯಗಳ, ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳನ್ನು ಒಳಗೊಂಡಿರುವ ಜಿಎಸ್ಟಿ ಕೌನ್ಸಿಲ್, ಎಲೆಕ್ಟ್ರಾನಿಕ್ ಇನ್ವಾಯ್ಸಿಂಗ್ ವ್ಯವಸ್ಥೆ ಮತ್ತು ಮಲ್ಟಿಪ್ಲೆಕ್ಸ್ಗಳಲ್ಲಿ ಇ-ಟಿಕೆಟಿಂಗ್ ಅನ್ನು ಸಹ ಅನುಮೋದಿಸಿದೆ.
EVಗಳ ಮೇಲಿನ ಜಿಎಸ್ಟಿ ದರವನ್ನು ಈಗಿನ ಶೇ.12 ರಿಂದ 5 ಕ್ಕೆ ಇಳಿಸುವ ಪ್ರಸ್ತಾಪ ಮತ್ತು ಎಲೆಕ್ಟ್ರಿಕ್ ಚಾರ್ಜರ್ಗಳ ಮೇಲಿನ ಜಿಎಸ್ಟಿ ದರವನ್ನು ಶೇ.18 ರಿಂದ ಶೇ.12 ಕ್ಕೆ ಇಳಿಸುವ ಪ್ರಸ್ತಾಪವನ್ನು ಫಿಟ್ಮೆಂಟ್ ಕಮಿಟಿಗೆ ಕಳುಹಿಸಿಕೊಡಲಾಗಿದೆ ಎಂದು ಪಾಂಡೆ ಹೇಳಿದರು.
National Anti-Profiteering Authority (NAA) ಅಧಿಕಾರಾವಧಿಯನ್ನು 2021 ರ ನವೆಂಬರ್ 30 ರವರೆಗೆ ಎರಡು ವರ್ಷಗಳ ಅವಧಿಗೆ ವಿಸ್ತರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.