ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸ್ಥೂಲ ಆರ್ಥಿಕತೆಯ ಸ್ಥಿತಿಗತಿಯನ್ನು ಪರಿಶೀಲನೆ ನಡೆಸುವ ಸಲುವಾಗಿ ಇಂದು ಉನ್ನತ ಆರ್ಥಿಕ ತಜ್ಞರೊಂದಿಗೆ ಸಭೆಯನ್ನು ನಡೆಸಲಿದ್ದಾರೆ.
ಈ ಸಭೆಯ ಸಂದರ್ಭದಲ್ಲಿ ಅವರು ಬಜೆಟ್ ಪ್ರಸ್ತಾವಣೆಗಳ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ನೀತಿ ಆಯೋಗದಲ್ಲಿ ಸಭೆ ನಡೆಯಲಿದೆ ಎಂದು ಹೇಳಲಾಗಿದೆ.
ಸಭೆಯಲ್ಲಿ ಆರ್ಥಿಕ ತಜ್ಞರು ಪ್ರಧಾನಿ ಮೋದಿಯವರಿಗೆ ಪ್ರಾತ್ಯಕ್ಷಿಕೆಯನ್ನು ನೀಡಲಿದ್ದಾರೆ ಎಂದು ಹೇಳಲಾಗಿದೆ.
ಬೆಳವಣಿಗೆಯ ವೇಗವರ್ಧನೆಗೆ ಮತ್ತು ಉದ್ಯೋಗ ಸೃಷ್ಟಿಗೆ ಇರುವ ಅಡೆತಡೆಗಳನ್ನು ಸಭೆಯಲ್ಲಿ ಚರ್ಚಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಆರ್ಥಿಕತೆಯ ಬೆಳವಣಿಗೆಯ ಸ್ಥಿತಿಯನ್ನು ಹೇಗೆ ಮರಳಿ ತರುವುದು ಮತ್ತು ಅದನ್ನು ಹೇಗೆ ಉನ್ನತ ಬೆಳವಣಿಗೆಯ ಮಟ್ಟಕ್ಕೆ ಕೊಂಡೊಯ್ಯುವುದು ಎಂಬುದರ ಬಗ್ಗೆ ಪ್ರಮುಖವಾಗಿ ಗಮನ ಹರಿಸಲಾಗುತ್ತದೆ ಎಂದು ಹೇಳಲಾಗಿದೆ.
ಇಂದಿನ ಸಭೆಯಲ್ಲಿ ಅರ್ಥಶಾಸ್ತ್ರಜ್ಞರು ಪ್ರಧಾನಿ ಮುಂದೆ ಪ್ರಾತ್ಯಕ್ಷಿಗಳನ್ನು ನೀಡಲಿದ್ದಾರೆ. ಮೋದಿ ಅವರೊಂದಿಗೆ ಬಜೆಟ್ ಪ್ರಸ್ತಾಪಗಳ ಬಗ್ಗೆ ಚರ್ಚಿಸಲಿದ್ದಾರೆ. ಈ ವರ್ಷದ ಬಜೆಟ್, ಆರ್ಥಿಕತೆಯನ್ನು ಹೆಚ್ಚಿನ ಬೆಳವಣಿಗೆಯ ಪಥದತ್ತ ಕೊಂಡೊಯ್ಯುವ ಮಾರ್ಗಸೂಚಿಯನ್ನು ರೂಪಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಶನಿವಾರ ನಡೆದ ನೀತಿ ಆಯೋಗದ ಸಭೆಯಲ್ಲಿ ಪ್ರಧಾನಿ ಮೋದಿ ಅವರು, 2024 ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವ ಗುರಿ ಸವಾಲಿನ ಕೆಲಸ ಆದರೆ ಸಾಧಿಸಬಹುದಾದ ಕೆಲಸ ಎಂದು ಹೇಳಿದ್ದರು. ಸಭೆಯಲ್ಲಿ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ಗಳು, ಕೇಂದ್ರ ಸಚಿವರು ಮತ್ತು ಸರ್ಕಾರಿ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.