ನವದೆಹಲಿ: ಆದಾಯ ತೆರಿಗೆ ಇಲಾಖೆಯ ಭ್ರಷ್ಟಾಚಾರ ಆರೋಪ ಹೊಂದಿದ್ದ ಹಲವಾರು ಅಧಿಕಾರಿಗಳಿಗೆ ಈಗಾಗಲೇ ಕಡ್ಡಾಯ ನಿವೃತ್ತಿಯನ್ನು ಹೊಂದುವಂತೆ ಸೂಚಿಸಿರುವ ಕೇಂದ್ರ ಸರ್ಕಾರ, ಇದೀಗ ಭ್ರಷ್ಟಚಾರ ಎಸಗಿದ ಮತ್ತು ಇತರ ತಪ್ಪುಗಳನ್ನು ಮಾಡಿದ ಅಧಿಕಾರಿಗಳ ಪಟ್ಟಿಯನ್ನು ಪ್ರತಿ ತಿಂಗಳು ಸಿದ್ಧಪಡಿಸುವಂತೆ ಎಲ್ಲಾ ಸಚಿವಾಲಯ ಮತ್ತು ಇಲಾಖೆಗಳಿಗೂ ಸೂಚನೆಯನ್ನು ನೀಡಿದೆ.
ಈ ವರದಿಗಳನ್ನು ಪ್ರತಿ ತಿಂಗಳ 15ನೇ ತಾರೀಖಿನೊಳಗೆ ಸಾರ್ವಜನಿಕ ಉದ್ಯಮ ಇಲಾಖೆಗೆ ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ ಮತ್ತು ಈ ವರದಿಯ ಆಧಾರದ ಮೇಲೆ ಹೆಚ್ಚು ಕಳಂಕಿತ ಅಧಿಕಾರಿಗಳನ್ನು ಗುರುತಿಸಿ ಅವರನ್ನು ಕಡ್ಡಾಯ ನಿವೃತ್ತಿಗೆ ಒಳಪಡಿಸುವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ, ಸಚಿವಾಲಯಗಳು ಮತ್ತು ಸರ್ಕಾರಿ ಇಲಾಖೆಗಳಿಗೆ ಅಧಿಕಾರಿಗಳ ಮೇಲೆ ಹದ್ದಿನ ಕಣ್ಗಾವಲನ್ನು ಇಡುವಂತೆ ಸೂಚಿಸಲಾಗಿದ್ದು, ಕಡ್ಡಾಯ ನಿವೃತ್ತಿಗೆ ಒಳಪಡುವಂತಹ ಕೃತ್ಯ ಎಸಗಿದವರನ್ನು ಗುರುತಿಸಿ ಅವರನ್ನು ಹೊರ ಹಾಕುವ ಕಾರ್ಯವನ್ನು ತ್ವರಿತಗೊಳಿಸುವಂತೆ ತಿಳಿಸಲಾಗಿದೆ.
ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂಬ ಕಟು ಸಂದೇಶವನ್ನು ಅಧಿಕಾರಿಗಳಿಗೆ ರವಾನಿಸುವ ಸಲುವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಕಡ್ಡಾಯ ನಿವೃತ್ತಿಯ ನಿಬಂಧನೆಯು 1972 ರ ಕೇಂದ್ರ ನಾಗರಿಕ ಸೇವೆಗಳ (ಪಿಂಚಣಿ) ನಿಯಮಗಳ ಮೂಲಭೂತ ನಿಯಮ 56 (ಜೆ) ನಲ್ಲಿ ಬರುತ್ತದೆ. ಆದರೆ ಈ ನಿಯಮವನ್ನು ಅತ್ಯಂತ ಪರಿಣಾಮಕಾರಿಯಾಗಿ ಬಳಕೆ ಮಾಡುತ್ತಿರುವುದು ಇದೇ ಮೊದಲು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.