ನವದೆಹಲಿ: 2025 ರ ವೇಳೆಗೆ ಟ್ಯುಬರ್ಕ್ಯುಲೊಸಿಸ್ (ಟಿಬಿ) ಅನ್ನು ದೇಶದಿಂದ ಹೊಡೆದೋಡಿಸುವ ಸಲುವಾಗಿ ಸರ್ಕಾರವು ರಾಷ್ಟ್ರೀಯ ಕಾರ್ಯತಂತ್ರ ಯೋಜನೆಯನ್ನು ಅಭಿವೃದ್ಧಿಪಡಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರು ಲೋಕಸಭೆಗೆ ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಭಾರತದಲ್ಲಿ ವಾರ್ಷಿಕವಾಗಿ 27.4 ಲಕ್ಷ ಅಂದಾಜು ಹೊಸ ಟಿಬಿ ಪ್ರಕರಣಗಳು ದಾಖಲಾಗುತ್ತದೆ, ಇದು ಒಟ್ಟು ಸಂಖ್ಯೆಯ ದೃಷ್ಟಿಯಿಂದ ಅತಿ ಹೆಚ್ಚಿನ ಪ್ರಕರಣವಾಗಿದೆ.
ಜಾಗತಿಕ ಟಿಬಿ ವರದಿಯ ಪ್ರಕಾರ, 2017 ರಲ್ಲಿ ದೇಶದಲ್ಲಿ ಟಿಬಿ ಪ್ರಕರಣಗಳು ಒಂದು ಲಕ್ಷ ಜನಸಂಖ್ಯೆಗೆ 204 ಆಗಿತ್ತು. ಆದರೆ, ಒಂದು ಲಕ್ಷ ಜನಸಂಖ್ಯೆಗೆ 2014 ಟಿಬಿ ಪ್ರಕರಣಗಳನ್ನು ಹೊಂದುವ ಮೂಲಕ ಭಾರತವು ವಿಶ್ವದ 35 ನೇ ಸ್ಥಾನದಲ್ಲಿದೆ. ಕಳೆದ ವರ್ಷ 5 ಲಕ್ಷ 62 ಸಾವಿರ ರೋಗಿಗಳು ಟಿಬಿಯಿಂದ ಗುಣಮುಖರಾಗಿದ್ದರು.
ಟಿಬಿಯನ್ನು ಸಾಮಾನ್ಯವಾಗಿ ಕ್ಷಯರೋಗ ಎಂದು ಕರೆಯಲಾಗುತ್ತದೆ. ಇದು ಶ್ವಾಸಕೋಶದ ಮೇಲೆ ಮುಖ್ಯವಾಗಿ ಪರಿಣಾಮ ಬೀರುವ ಗಂಭೀರ ಸಾಂಕ್ರಾಮಿಕ ಕಾಯಿಲೆಯಾಗಿದೆ. ಕ್ಷಯರೋಗಕ್ಕೆ ಕಾರಣವಾಗುವ ಬ್ಯಾಕ್ಟೀರಿಯಾವು ಕೆಮ್ಮು ಮತ್ತು ಸೀನುಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.