ನವದೆಹಲಿ: ಕಳೆದ ಕೆಲವು ವರ್ಷಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು ಗಮನಾರ್ಹವಾದ ಸಾಧನೆಯನ್ನು ಮಾಡಿದೆ. ಭಯೋತ್ಪಾದನೆ ಮತ್ತು ಉಗ್ರವಾದವನ್ನು ನಿಗ್ರಹಿಸಲು ಎನ್ಐಎ ಈಗ ಅಂತಾರಾಷ್ಟ್ರೀಯ ಸಂಸ್ಥೆಗಳಿಗೂ ಸಹಾಯ ಮಾಡುತ್ತಿದೆ. ಭಯೋತ್ಪಾದನೆ ನಿರ್ಮೂಲನೆಯಲ್ಲಿ ಎನ್ಐಎಗೆ ಹೆಚ್ಚಿನ ಬಲವನ್ನು ನೀಡುವ ಎರಡು ಮಹತ್ವದ ಕಾನೂನುಗಳ ತಿದ್ದುಪಡಿಗೆ ಕೇಂದ್ರ ಸಂಪುಟ ನಿನ್ನೆ ಅನುಮೋದನೆಯನ್ನು ನೀಡಿದೆ.
ಅಧಿಕೃತ ಹೇಳಿಕೆಯ ಪ್ರಕಾರ, ಮುಂದಿನ ದಿನಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಗೆ ತಿದ್ದುಪಡಿ ತರಲು ಪ್ರತ್ಯೇಕ ಮಸೂದೆಗಳನ್ನು ಸಂಸತ್ತಿನಲ್ಲಿ ಪರಿಚಯಿಸಲಾಗುತ್ತಿದೆ.
ಭಾರತ ಮತ್ತು ವಿದೇಶಗಳಲ್ಲಿನ ಭಯೋತ್ಪಾದಕ ಪ್ರಕರಣಗಳ ತನಿಖೆಗಾಗಿ ಎನ್ಐಎಗೆ ಹೆಚ್ಚಿನ ಬಲವನ್ನು ನೀಡಲು ಎರಡು ಕಾನೂನುಗಳನ್ನು ತಿದ್ದುಪಡಿ ಮಾಡುವ ಪ್ರಸ್ತಾಪವನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈ ತಿದ್ದುಪಡಿಗಳು ಎನ್ಐಎಗೆ, ಸೈಬರ್ ಅಪರಾಧಗಳು ಮತ್ತು ಮಾನವ ಕಳ್ಳಸಾಗಣೆ ಪ್ರಕರಣಗಳನ್ನು ತನಿಖೆ ಮಾಡಲು ಅನುಮತಿಸುತ್ತದೆ. UAPA ನ 4ನೇ ಶೆಡ್ಯೂಲ್ ತಿದ್ದುಪಡಿಯು NIA ಗೆ ಭಯೋತ್ಪಾದಕ ಸಂಪರ್ಕ ಹೊಂದಿರುವ ಸಂಶಯಾಸ್ಪದ ವ್ಯಕ್ತಿಯನ್ನು ‘ಉಗ್ರ’ ಎಂದು ಘೋಷಿಸುವ ಅವಕಾಶ ನೀಡುತ್ತದೆ.
ಈಗ, ಕೇವಲ ಸಂಘಟನೆಗಳನ್ನು ಮಾತ್ರ ‘ಭಯೋತ್ಪಾದಕ ಸಂಘಟನೆಗಳು’ ಎಂದು ಘೋಷಿಸಬಹುದಾಗಿದೆ.
ಮುಂಬಯಿ ಭಯೋತ್ಪಾದನಾ ದಾಳಿಯ ಬಳಿಕ 2009 ರಲ್ಲಿ ಎನ್ಐಎ ಸ್ಥಾಪಿಸಲಾಯಿತು, ಈ ದಾಳಿಯಲ್ಲಿ 166 ಜನ ಬಲಿಯಾಗಿದ್ದರು.
ಹೊಸ ಸವಾಲುಗಳನ್ನು ಎದುರಿಸಲು ಎನ್ಐಎಗೆ ಹೆಚ್ಚಿನ ಅಧಿಕಾರ ನೀಡುವ ಸಲುವಾಗಿ 2017 ರಿಂದ ಕೇಂದ್ರ ಗೃಹ ಸಚಿವಾಲಯವು ಎರಡು ಕಾನೂನುಗಳನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.