ನವದೆಹಲಿ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವ ರಾಜ್ಯ ಸರ್ಕಾರದ ಯೋಜನೆಗೆ ನಾಗರಿಕರು ಮತ್ತು ಪರಿಸರ ಸಂಘಟನೆಗಳಿಂದ ತೀವ್ರ ಸ್ವರೂಪದ ವಿರೋಧ ವ್ಯಕ್ತವಾಗಿದೆ.
ಶಿವಮೊಗ್ಗದಲ್ಲಿ ಶರವಾತಿ ನದಿಗೆ ಕಟ್ಟಲಾಗಿರುವ ಲಿಂಗನಮಕ್ಕಿ ಜಲಾಶಯದಿಂದ ನೀರನ್ನು ಹರಿಸುವ ಬಗ್ಗೆ ಕರ್ನಾಟಕ ಸರ್ಕಾರ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಸಿದ್ಧಪಡಿಸಲು ಸಜ್ಜಾಗಿದೆ. ಆದರೆ ಶರಾವತಿ ಹೈಡೆಲ್ ಯೋಜನೆಗೆ ನೀರಿನ ಮೂಲವಾಗಿರುವ ಜಲಾಶಯವು ಪ್ರಸ್ತುತ ನೀರಿನ ಕೊರತೆಯನ್ನು ಎದುರಿಸುತ್ತಿದೆ. ಪ್ರಸ್ತುತ ಅದರಲ್ಲಿ ಲಭ್ಯವಿರುವ ನೀರು ಒಟ್ಟು ಸಾಮರ್ಥ್ಯದ ಕೇವಲ ಶೇ.9ರಷ್ಟು ಮಾತ್ರ ಆಗಿದೆ, ಇದರಲ್ಲಿ ಇನ್ನು ಒಂದು ತಿಂಗಳು ಮಾತ್ರ ವಿದ್ಯುತ್ ಉತ್ಪಾದಿಸಲು ಸಾಧ್ಯವಾಗುತ್ತದೆ.
ಶರಾವತಿ ನದಿಯಲ್ಲಿ ನಿರ್ಮಿಸಲಾಗಿರುವ ಲಿಂಗನಮಕ್ಕಿ ಜಲಾಶಯವು ಶರಾವತಿ ಹೈಡೆಲ್ ಯೋಜನೆಗೆ ನೀರಿನ ಮೂಲವಾಗಿದೆ. ಹತ್ತು ಘಟಕಗಳಲ್ಲಿ ವಿದ್ಯುತ್ ಉತ್ಪಾದಿಸುವ ಈ ಯೋಜನೆಯು ಪ್ರತಿದಿನ 1035 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತದೆ. ಲಿಂಗನಮಕ್ಕಿ ಜಲಾಶಯದ ಎಂಜಿನಿಯರ್ಗಳ ಪ್ರಕಾರ, ಹೈಡಲ್ ಯೋಜನೆಯು ದಿನಕ್ಕೆ 24 ದಶಲಕ್ಷ ಯುನಿಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಇದಲ್ಲದೆ, ಈ ಯೋಜನೆಯು ವ್ಯಾಪಕ ಪ್ರಮಾಣದ ಅರಣ್ಯನಾಶಕ್ಕೆ ಕಾರಣವಾಗಬಹುದು ಮತ್ತು ಜಿಲ್ಲೆಯ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂಬ ಆತಂಕವನ್ನು ಪರಿಸರವಾದಿಗಳು ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಯೋಜನೆಯನ್ನು ಅವೈಜ್ಞಾನಿಕ ಎಂದು ಆರೋಪಿಸಿದ್ದಾರೆ, ರಾಜ್ಯ ಬಿಜೆಪಿಯೂ ಯೋಜನೆ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ. ಜಿಲ್ಲೆಯ ಶಾಸಕ ಹರತಾಳ ಹಾಲಪ್ಪ ಅವರು ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರವನ್ನು ಬರೆದು, ತಕ್ಷಣವೇ ಈ ಯೋಜನೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ.
ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ, ಮುರುಘಾ ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಅನೇಕ ಪರಿಸರವಾದಿಗಳು, ರಾಜಕಾರಣಿಗಳು, ಸೇರಿದಂತೆ ಅನೇಕರು ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.