ನವದೆಹಲಿ: 2015ರ ಗೋಹತ್ಯಾ ನಿಷೇಧ ಕಾನೂನಿಗೆ ಮತ್ತಷ್ಟು ಕಠಿಣ ನಿಯಮಗಳನ್ನು ಸೇರ್ಪಡೆಗೊಳಿಸಲು ಹರಿಯಾಣ ಸರ್ಕಾರ ನಿರ್ಧರಿಸಿದೆ. ಅಕ್ರಮ ಗೋಸಾಗಾಣೆಗೆ ಬಳಸಲಾದ ವಾಹನವನ್ನು ವಶಪಡಿಸಿಕೊಳ್ಳುವ ಮತ್ತು ಜಾಗಗಳನ್ನು ಪರಿಶೀಲನೆಗೊಳಪಡಿಸಲು ಅಧಿಕಾರವನ್ನು ಪೊಲೀಸರಿಗೆ ನೀಡುವ ಸಲುವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಪ್ರಸ್ತುತ ಇರುವ ಹರಿಯಾಣ ಗೋವಂಶ್ ಸಂರಕ್ಷಣ್ ಮತ್ತು ಗೋಸಂವರ್ಧನ್ ಕಾಯ್ದೆ, 2015 ಗೋ ಹತ್ಯೆಯನ್ನು, ಕಳ್ಳಸಾಗಾಣೆಯನ್ನು ಮತ್ತು ಗೋಮಾಂಸ ಸೇವನೆಯನ್ನು ನಿಷೇಧ ಮಾಡಿದೆ.
ಇದೀಗ ಈ ಕಾಯ್ದೆಗೆ ತಿದ್ದುಪಡಿಯನ್ನು ತರಲು ಸಿಎಂ ಮನೋಹರ್ ಲಾಲ್ ಖಟ್ಟರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯು ಅನುಮೋದನೆಯನ್ನು ನೀಡಿದೆ. ಈ ಕಾನೂನನ್ನು ಹೆಚ್ಚು ಬಲಿಷ್ಠ ಮತ್ತು ವಾಸ್ತವವಾಗಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಈ ಹೊಸ ತಿದ್ದುಪಡಿ ಕಾಯ್ದೆಯನ್ನು ಹರಿಯಾಣ ಗೋವಂಶ್ ಸಂರಕ್ಷಣ್ ಮತ್ತು ಗೋಸಂವರ್ಧನ್ (ತಿದ್ದುಪಡಿ) ಕಾಯ್ದೆ, 2019 ಎಂದು ಕರೆಯಲಾಗುವುದು ಎಂದು ತಿಳಿಸಿದೆ.
ಹರಿಯಾಣದಲ್ಲಿ 2015ರಲ್ಲಿ ಅಧಿಕಾರಕ್ಕೆ ಬಂದ ಖಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧವನ್ನು ಜಾರಿಗೆ ತಂದಿತ್ತು. ಗೋಹತ್ಯೆ ಮಾಡುವವರಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು, ಗೋವನ್ನು ಹತ್ಯೆಗಾಗಿ ರಫ್ತು ಮಾಡುವವರಿಗಾಗಿ 3 ರಿಂದ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. ಗೋಮಾಂಸ ಮಾರಾಟಕ್ಕೆ 3 ರಿಂದ 5 ವರ್ಷ ಜೈಲು ಮತ್ತು ದಂಡವನ್ನು ವಿಧಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.