ಶ್ರೀನಗರ: ಜಮ್ಮು ಕಾಶ್ಮೀರದ ಬುದ್ಗಾಂ ಜಿಲ್ಲೆಯ ಕ್ರಲ್ಪೋರ ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹತ್ಯೆ ಮಾಡಿದೆ.
ವರದಿಗಳ ಪ್ರಕಾರ, ಎರಡರಿಂದ ಮೂರು ಮಂದಿ ಉಗ್ರರು ಈ ಪ್ರದೇಶದಲ್ಲಿ ಅವಿತುಕೊಂಡಿದ್ದಾರೆ. ಇವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ವಿಶೇಷ ಕಾರ್ಯಾಚರಣಾ ಪಡೆ (SOG), 50 ರಾಷ್ಟ್ರೀಯ ರೈಫಲ್ಸ್ ಮತ್ತು ಸೆಂಟ್ರಲ್ ರಿಸರ್ವ್ ಪೊಲೀಸ್ ಪೋರ್ಸ್ (ಸಿಆರ್ ಪಿಎಫ್) ಜಂಟಿಯಾಗಿ ಕಾರ್ಯಾಚರಣೆಯನ್ನು ಆರಂಭಿಸಿವೆ. ಬೆಳಿಗ್ಗೆ 3.15ರ ಸುಮಾರಿಗೆ ಕಾರ್ಯಾಚರಣೆ ಆರಂಭಗೊಂಡಿದೆ. ಅವಿತುಕೊಂಡಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಮತ್ತು ಗ್ರೆನೇಡ್ ದಾಳಿಯನ್ನು ನಡೆಸಲು ಆರಂಭಿಸಿದಾಗ ಗುಂಡಿನ ಚಕಮಕಿ ಏರ್ಪಟ್ಟಿದೆ.
ಮೂಲಗಳ ಪ್ರಕಾರ, ಮೃತ ಉಗ್ರನ ಶವವನ್ನು ವಶಕ್ಕೆ ಪಡೆಯಲಾಗಿದ್ದು, ಆತ ಎಲ್ಲಿಯವನು ಮತ್ತು ಯಾವ ಸಂಘಟನೆಗೆ ಸೇರಿದವನು ಎಂಬಿತ್ಯಾದಿ ಮಾಹಿತಿಗಳನ್ನು ಇನ್ನಷ್ಟೇ ತಿಳಿದುಕೊಳ್ಳಬೇಕಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.