ನವದೆಹಲಿ: ಲೋಕಸಭಾ ಚುನಾವಣೆಯ ಗೆಲುವಿನಿಂದಾಗಿ ಅತ್ಯುತ್ಸಾಹದಲ್ಲಿರುವ ಬಿಜೆಪಿಯು, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ ಅನ್ನು ಇನ್ನಷ್ಟು ಹೆಚ್ಚಿನ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖಗೊಂಡಿದೆ. ಇದಕ್ಕಾಗಿ ಅದು ವಿಶೇಷ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಮತ್ತು ಲಭ್ಯವಿರುವ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳುತ್ತಿದೆ.
ಈ ಬಾರಿಯ ಮನ್ ಕೀ ಬಾತ್ ಕಾರ್ಯಕ್ರಮ ಜೂನ್ 30 ರಂದು ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ.
ಪ್ರಧಾನಿಯವರ ಮಾಸಿಕ ಕಾರ್ಯಕ್ರಮವನ್ನು ಹೆಚ್ಚು ಸಂಖ್ಯೆಯ ಜನರು ಆಲಿಸುವಂತೆ ಮಾಡುವ ಸಲುವಾಗಿ ಪಕ್ಷದ ಕಾರ್ಯಕರ್ತರು ಎಲ್ಲಾ ಕಡೆಯು ದೊಡ್ಡ ಸ್ಕ್ರೀನ್ ಸೌಲಭ್ಯ ಮತ್ತು ಉತ್ತಮ ರೇಡಿಯೋ ಸೆಟ್ ಒದಗಿಸುವಂತಹ ಕಾರ್ಯವನ್ನು ಮಾಡುತ್ತಿದ್ದಾರೆ. ಪಕ್ಷದ ನಾಯಕರುಗಳು ಜನರೊಂದಿಗೆ ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ ‘ಮನ್ ಕೀ ಬಾತ್’ ಆಲಿಸುವ ನಿರ್ಧಾರ ಮಾಡಿದ್ದಾರೆ.
“ಮನ್ ಕೀ ಬಾತ್ ಕಾರ್ಯಕ್ರಮವು ಬಿಜೆಪಿ ವಾರ್ಷಿಕ ಕಾರ್ಯಕ್ರಮದ ಭಾಗ, ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ನಿರ್ದೇಶನದ ಮೇರೆಗೆ ನಾವು ಕಾರ್ಯಕ್ರಮವನ್ನು ಎಲ್ಲಾ ಬೂತ್ ಮಟ್ಟಗಳಿಗೂ ಪರಿಣಾಮಕಾರಿ ವಿಧಾನದಲ್ಲಿ ತೆಗೆದುಕೊಂಡು ಹೋಗಲು ಬಯಸಿದ್ದೇವೆ” ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ತರುಣ್ ಚುಗ್ ಹೇಳಿದ್ದಾರೆ.
ಮನ್ ಕೀ ಬಾತ್ ಕಾರ್ಯಕ್ರಮಕ್ಕೆ ಸಲಹೆ ಸೂಚನೆಗಳನ್ನು ನೀಡುವಂತೆ ಪ್ರಧಾನಿಯವರು ಈಗಾಗಲೇ ಜನರಿಗೆ ಮನವಿ ಮಾಡಿಕೊಂಡಿದ್ದಾರೆ.
ಮೋದಿಯವರ ಮೊದಲ ಅವಧಿಯ ಕೊನೆಯ ಸಂಚಿಕೆಯು ಫೆ. 24 ರಂದು ಪ್ರಸಾರಗೊಂಡಿತ್ತು. ಬಳಿಕ ಲೋಕಸಭಾ ಚುನಾವಣೆ ಬಂದ ಹಿನ್ನಲೆಯಲ್ಲಿ ಸ್ಥಗಿತಗೊಂಡಿತ್ತು. ಇದೀಗ ಎರಡನೇಯ ಅವಧಿಯ ಮನ್ ಕೀ ಬಾತ್ಗೆ ಸಿದ್ಧತೆ ಆರಂಭಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.