ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಯಂತ್ರಣದಲ್ಲಿದೆ ಮತ್ತು ಆ ರಾಜ್ಯದಲ್ಲಿ ಮುಂದಿನ ಆರು ತಿಂಗಳುಗಳೊಳಗೆ ವಿಧಾನಸಭಾ ಚುನಾವಣೆ ಜರುಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಅಲ್ಲಿನ ರಾಷ್ಟ್ರಪತಿ ಆಡಳಿತವನ್ನು ಮತ್ತೆ ಆರು ತಿಂಗಳುಗಳ ಕಾಲ ವಿಸ್ತರಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡನೆಗೊಳಿಸುವ ವೇಳೆ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.
ಜಮ್ಮು ಕಾಶ್ಮೀರದ ಭಯೋತ್ಪಾದನೆಯ ಬಗ್ಗೆ ಶೂನ್ಯ ತಾಳ್ಮೆ ಧೋರಣೆಯನ್ನು ಅನುಸರಿಸುವುದಾಗಿ ಪುನರುಚ್ಛರಿಸಿದ ಅವರು, ಕಳೆದ ಒಂದು ವರ್ಷಗಳಿಂದ ನಮ್ಮ ಸರ್ಕಾರವು ಕಣಿವೆ ರಾಜ್ಯದಿಂದ ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ಸಾಕಷ್ಟು ಕಾರ್ಯಗಳನ್ನು ಮಾಡಿದೆ ಎಂದರು.
ಭದ್ರತಾ ಕಾರಣಗಳಿಂದಾಗಿ ಜಮ್ಮು ಕಾಶ್ಮೀರದಲ್ಲಿ ಚುನಾವಣಾ ಪ್ರಕ್ರಿಯೆ ವಿಳಂಬವಾಗುತ್ತಿದೆ. ಕಳೆದ ತಿಂಗಳು ಚುನಾವಣಾ ಆಯೋಗವು ಕಣಿವೆ ರಾಜ್ಯದಲ್ಲಿ ಚುನಾವಣೆ ನಡೆಸಲು ಸರ್ಕಾರ ಹಸಿರು ನಿಶಾನೆ ತೋರಿಸಿದೆ ಎಂದಿತ್ತು. ಈ ವರ್ಷದ ಅಂತ್ಯದೊಳಗೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.
ಪುಲ್ವಾಮ ದಾಳಿ, ರಂಜಾನ್ ಮುಂತಾದ ಕಾರ್ಯಗಳಿಂದ ಚುನಾವಣೆ ವಿಳಂಬವಾಗಿದೆ. ಈ ವರ್ಷದ ಅಂತ್ಯದೊಳಗೆ ದಿನಾಂಕ ನಿಗದಿಪಡಿಸಲಾಗುತ್ತದೆ ಎಂದು ಆಯೋಗ ತಿಳಿಸಿದೆ. ಇದೀಗ ಅಮಿತ್ ಶಾ ಅವರೂ ಆರು ತಿಂಗಳೊಳಗೆ ಚುನಾವಣೆ ನಡೆಯಲಿದೆ ಎಂಬ ಸೂಚನೆಯನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.