ಕೋಲ್ಕತ್ತಾ: ಮಮತಾ ಸರ್ಕಾರದ ಅಧೀನದಲ್ಲಿರುವ ಕೂಚ್ ಬೆಹಾರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ (ಅಲ್ಪಸಂಖ್ಯಾತ ವಿಭಾಗ) ಮಂಗಳವಾರ, ಶೇ. 70 ರಷ್ಟು ಅಥವಾ ಅದಕ್ಕಿಂತ ಹೆಚ್ಚಿನ ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಹೊಂದಿರುವ ಸರ್ಕಾರಿ ಅಥವಾ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಡೈನಿಂಗ್ ರೂಮ್ ಕಟ್ಟುವಂತೆ ಸುತ್ತೋಲೆಯನ್ನು ಹೊರಡಿಸಿದೆ.
ಈ ಆದೇಶವನ್ನು ಜಾರಿಗೆ ತರುವ ಸಲುವಾಗಿ ಪಶ್ಚಿಮ ಬಂಗಾಳದ ಅಲ್ಪಸಂಖ್ಯಾತ ವ್ಯವಹಾರಗಳ ಮತ್ತು ಮದರಸಾ ಶಿಕ್ಷಣ ಇಲಾಖೆಯು ಶೇ.70ಕ್ಕಿಂತ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳ ಪಟ್ಟಿಯನ್ನು ತುರ್ತಾಗಿ ಸಿದ್ಧಪಡಿಸುವಂತೆ ಸೂಚನೆಯನ್ನು ನೀಡಿದೆ.
ಸುತ್ತೋಲೆಯ ಪ್ರಕಾರ, ಜೂನ್ 28 ರೊಳಗೆ ಜಿಲ್ಲಾ ಶಿಕ್ಷಣಾಧಿಕಾರಿ ಮತ್ತು ಶಾಲೆಗಳ ಜಿಲ್ಲಾ ಇನ್ಸ್ಪೆಕ್ಟರ್ಗಳು ಪಟ್ಟಿಯನ್ನು ಸಿದ್ಧ ಮಾಡಬೇಕಾಗಿದೆ. ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಶೇಕಡಾವಾರು ಪ್ರಮಾಣವನ್ನು ನಮೂದಿಸುವ ಡೇಟಾವನ್ನು ಪಡೆದು ಪಟ್ಟಿಯನ್ನು ಸಿದ್ಧಪಡಿಸಲು ಸೂಚಿಸಲಾಗಿದೆ.
ಧರ್ಮದ ಆಧಾರದಲ್ಲಿ ಶಾಲಾ ಮಕ್ಕಳಿಗೆ ವ್ಯವಸ್ಥೆಯನ್ನು ಒದಗಿಸುವ ಮಮತಾ ಬ್ಯಾನರ್ಜಿಯವರ ಕ್ರಮಕ್ಕೆ ಬಿಜೆಪಿ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದೆ. ಈ ಕ್ರಮದ ಹಿಂದೆ ಏನಾದರು ಪಿತೂರಿ ಇದೆಯೇ ಎಂದು ಪ್ರಶ್ನಿಸಿದೆ.
ಚುನಾವಣೆಯಲ್ಲಿ ಹಿನ್ನಡೆಯನ್ನು ಅನುಭವಿಸಿದ ಬಳಿಕವೂ ಮಮತಾ ಅವರು ತಮ್ಮ ಓಲೈಕೆ ರಾಜಕಾರಣವನ್ನು ಮುಂದುವರೆಸುತ್ತಲೇ ಇದ್ದಾರೆ ಎಂಬುದೇ ದೊಡ್ಡ ದುರಂತ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.