ಒಸಕಾ: ಜಪಾನಿನಲ್ಲಿ ಒಸಕಾ ನಗರದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದು, ಇದನ್ನು ಟ್ವಿಟರಿನಲ್ಲಿ ಹಂಚಿಕೊಂಡಿದ್ದಾರೆ. ಈ ಸೆಲ್ಫಿಗೆ ಅವರು ಹಿಂದಿಯಲ್ಲಿ ‘ಕಿತ್ನಾ ಅಚ್ಛೇ ಹೈ ಮೋದಿ’ ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.
ಮಾರಿಸನ್ ಆಸ್ಟ್ರೇಲಿಯಾದ ನೂತನ ಪ್ರಧಾನಿಯಾಗಿ ನೇಮಕಗೊಂಡಿದ್ದು, ಶನಿವಾರ ಒಸಕಾದಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಆತ್ಮೀಯವಾಗಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
ಕಳೆದ ತಿಂಗಳು ಈ ಇಬ್ಬರೂ ನಾಯಕರು ಪ್ರಧಾನಿಗಳಾಗಿ ನೇಮಕಗೊಂಡಿದ್ದಕ್ಕೆ ಪರಸ್ಪರ ಅಭಿನಂದನೆಗಳನ್ನು ತಿಳಿಸಿದ್ದರು ಮತ್ತು ಒಟ್ಟಿಗೆ ಕಾರ್ಯನಿರ್ವಹಿಸುವ ಪ್ರತಿಜ್ಞೆ ಮಾಡಿದ್ದರು. ಇದೀಗ ಇಬ್ಬರೂ ಜಿ20 ಶೃಂಗಸಭೆಯಲ್ಲಿ ಭೇಟಿಯಾಗಿದ್ದಾರೆ.
ಜಿ20 ಶೃಂಗಸಭೆಯಲ್ಲಿ 19 ದೇಶ ಮತ್ತು ಯುರೋಪಿಯನ್ ಯೂನಿಯನ್ಗಳು ಭಾಗವಹಿಸಿವೆ.
Kithana acha he Modi! #G20OsakaSummit pic.twitter.com/BC6DyuX4lf
— Scott Morrison (@ScottMorrisonMP) June 28, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.