ನವದೆಹಲಿ: 2020 ರ ಜೂನ್ 30 ರೊಳಗೆ ಇಡೀ ದೇಶದಲ್ಲಿ “ಒಂದು ರಾಷ್ಟ್ರ-ಒಂದು ಪಡಿತರ ಚೀಟಿ” ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪಾಸ್ವಾನ್, “ದೇಶಾದ್ಯಂತದ ಎಲ್ಲಾ ಪಡಿತರ ಚೀಟಿಗಳನ್ನು ಆಧಾರ್ ಕಾರ್ಡ್ಗಳೊಂದಿಗೆ ಲಿಂಕ್ ಮಾಡುವ ಮತ್ತು ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಮಾರಾಟ (ಪಾಯಿಂಟ್ ಆಫ್ ಸೇಲ್) ಯಂತ್ರದಲ್ಲಿ ಸಂಘಟಿಸುವ ಕಾರ್ಯವು ಅಂತಿಮ ಹಂತದಲ್ಲಿದೆ ಎಂದಿದ್ದಾರೆ.
ಪ್ರಸ್ತುತ, ಹತ್ತು ರಾಜ್ಯಗಳಲ್ಲಿ ಆಂಧ್ರಪ್ರದೇಶ, ಗುಜರಾತ್, ಹರಿಯಾಣ, ಜಾರ್ಖಂಡ್, ಕರ್ನಾಟಕ, ಕೇರಳ, ಮಹಾರಾಷ್ಟ್ರ, ರಾಜಸ್ಥಾನ, ತೆಲಂಗಾಣ, ಮತ್ತು ತ್ರಿಪುರಗಳಲ್ಲಿ ಸಂಪೂರ್ಣ ಆಹಾರ ಧಾನ್ಯ ವಿತರಣೆಗೆ ಶೇ.100ರಷ್ಟು ಪಿಓಎಸ್ ಯಂತ್ರಗಳನ್ನು ವ್ಯವಸ್ಥೆ ಮಾಡಲಾಗಿದೆ ಮತ್ತು ಎಲ್ಲಾ ಪಿಡಿಎಸ್ ಅಂಗಡಿಗಳನ್ನು ಇಂಟರ್ನೆಟ್ಗೆ ಲಿಂಕ್ ಮಾಡಲಾಗಿದೆ.
ಇನ್ನು ಮುಂದೆ ಈ ರಾಜ್ಯಗಳ ಜನರು ತಮ್ಮ ರಾಜ್ಯದ ಯಾವ ಮೂಲೆಯಿಂದಲೂ ಪಡಿತರವನ್ನು ಪಡೆದುಕೊಳ್ಳಬಹುದಾಗಿದೆ. ಈ ವ್ಯವಸ್ಥೆಯನ್ನು 2020ರ ಜೂನ್ ವೇಳೆಗೆ ದೇಶದ ಎಲ್ಲಾ ರಾಜ್ಯಗಳಲ್ಲೂ ಅನುಷ್ಠಾನಕ್ಕೆ ತರಲು ಕೇಂದ್ರ ಪ್ರಯತ್ನ ನಡೆಸಿದೆ. 2019 ರ ಆಗಸ್ಟ್ 15 ರ ವೇಳೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ, ಗುಜರಾತ್ ಮತ್ತು ಮಹಾರಾಷ್ಟ್ರದ ಫಲಾನುಭವಿಗಳು ಉಭಯ ರಾಜ್ಯಗಳಲ್ಲಿ ಎಲ್ಲಿಂದಾದರೂ ಪಡಿತರವನ್ನು ಪಡೆಯಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಪಾಸ್ವಾನ್ ಹೇಳಿದ್ದಾರೆ.
“ಒನ್ ನೇಷನ್ ಒನ್ ರೇಷನ್ ಕಾರ್ಡ್” ಯೋಜನೆಯನ್ನು ರಾಷ್ಟ್ರದಾದ್ಯಂತ ಜಾರಿಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಮತ್ತು ಅದಕ್ಕಾಗಿ ಎಲ್ಲಾ ಪಡಿತರ ಚೀಟಿಗಳ ಡೇಟಾವನ್ನು ಒಂದು ಸರ್ವರ್ ಮತ್ತು ಯಾವುದೇ ಫಲಾನುಭವಿಗಳಿಗೆ ಲಿಂಕ್ ಮಾಡಲಾಗುವುದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಇದರಿಂದ 2020ರ ಜೂನ್ ನಂತರ ತಮ್ಮ ಆಯ್ಕೆಯ ಯಾವುದೇ ಸಾರ್ವಜನಿಕ ವಿತರಣಾ ವ್ಯವಸ್ಥೆಯಿಂದ ಧಾನ್ಯವನ್ನು ಪಡೆಯಲು ಜನರಿಗೆ ಸಾಧ್ಯವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.