ನವದೆಹಲಿ: ಎಎಪಿ ಸಮಾವೇಶದ ವೇಳೆ ಆತ್ಮಹತ್ಯೆ ಮಾಡಿಕೊಂಡ ರೈತ ಗಜೇಂದ್ರ ಸಿಂಗ್ನನ್ನು ಹುತಾತ್ಮ ಎಂದು ಘೋಷಿಸಿದ್ದ ದೆಹಲಿಯ ಎಎಪಿ ಸರ್ಕಾರವನ್ನು ದೆಹಲಿ ಹೈಕೋರ್ಟ್ ಬುಧವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಗಜೇಂದ್ರದನ್ನು ಯಾವ ಆಧಾರದಲ್ಲಿ ಹುತಾತ್ಮ ಎಂದು ಘೋಷಿಸಲಾಗಿದೆ ಎಂಬುದಕ್ಕೆ ನಾಲ್ಕು ವಾರಗಳೊಳಗೆ ಉತ್ತರಿಸುವಂತೆ ನೋಟಿಸ್ ಜಾರಿಗೊಳಿಸಿದೆ.
ಕೇಂದ್ರದ ಭೂಸ್ವಾಧೀನ ಮಸೂದೆ ವಿರುದ್ಧ ಎಎಪಿ ಸಮಾವೇಶ ನಡೆಸಿದ ಸಂದರ್ಭ ಜಂತರ್ ಮಂತರ್ನಲ್ಲಿ ಗಜೇಂದ್ರ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ,ತ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂಬುದು ಇದುವರೆಗೆ ತಿಳಿದು ಬಂದಿಲ್ಲ.
ಈ ಘಟನೆ ಎಎಪಿಗೆ ತೀವ್ರ ಮುಜುಗರವನ್ನುಂಟು ಮಾಡಿತ್ತು, ಅರವಿಂದ್ ಕೇಜ್ರಿವಾಲ್ ವಿರುದ್ಧ ಆಕ್ರೋಶಗಳೂ ವ್ಯಕ್ತವಾಗಿದ್ದವು. ಆನರ ಆಕ್ರೋಶದಿಂದ ತಪ್ಪಿಸಿಕೊಳ್ಳಲು ಗಜೇಂದ್ರನನ್ನು ಹುತಾತ್ಮ ಎಂದು ಕರೆಯಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.