ಲಕ್ನೋ: ಪ್ರಧಾನಿ ನರೇಂದ್ರ ಮೋದಿಯವರ ಹಾದಿಯಲ್ಲೇ ಸಾಗುತ್ತಿದ್ದಾರೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ. ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆ ಧೋರಣೆಯನ್ನು ಅನುಸರಿಸುತ್ತಿರುವ ಅವರು 400 ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿದ್ದಾರೆ ಮತ್ತು ಸುಮಾರು 200 ಉದ್ಯೋಗಿಗಳಿಗೆ ಅವಧಿ ಪೂರ್ವ ನಿವೃತ್ತಿಯನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವದರಿಗಳ ಪ್ರಕಾರ, ಕರ್ತವ್ಯಲೋಪ ಮತ್ತು ಭ್ರಷ್ಟಾಚಾರ ಎಸಗಿದ್ದಕ್ಕಾಗಿ ಪರಿಶೀಲನೆಯಲ್ಲಿದ್ದ ಸುಮಾರು 600 ಸರ್ಕಾರಿ ಉದ್ಯೋಗಳ ವಿರುದ್ಧ ಯೋಗಿ ಸರ್ಕಾರ ಕ್ರಮ ಜರುಗಿಸಿದೆ.
ಭ್ರಷ್ಟ ಅಧಿಕಾರಿಗಳಿಗೆ ಯಾವುದೇ ಕರುಣೆ ತೋರಿಸದ ಯುಪಿ ಸರ್ಕಾರ ವಿವಿಧ ಇಲಾಖೆಗಳ 400 ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಶಿಫಾರಸು ಮಾಡಿದೆ ಎಂದು ವರದಿಗಳು ತಿಳಿಸಿವೆ. ಅಲ್ಲದೇ, ತಪ್ಪಿತಸ್ಥ ಅಧಿಕಾರಿಗಳಿಗೆ ಭವಿಷ್ಯದಲ್ಲಿ ಭಡ್ತಿ ನೀಡದಿರಲು, ಕ್ಷಿಪ್ರ ವರ್ಗಾವಣೆಗಳನ್ನು ಮಾಡಲು ಮತ್ತು ಅನುಕೂಲಕರ ಪೋಸ್ಟಿಂಗ್ಗಳನ್ನು ನೀಡದಿರಲು ನಿರ್ಧರಿಸಲಾಗಿದೆ.
ಭ್ರಷ್ಟಾಚಾರ ಎಸಗಿದ ಅಪರಾಧಿಗಳೆಂದು ಸಾಬೀತಾಗಿರುವ 200 ಕ್ಕೂ ಹೆಚ್ಚು ಕಳಂಕಿತ ಅಧಿಕಾರಿಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಸಿದ್ಧಪಡಿಸಿದೆ ಮತ್ತು ಅವರಿಗೆ ಅವಧಿಪೂರ್ವ ನಿವೃತ್ತಿಯನ್ನು ಶಿಫಾರಸು ಮಾಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲಿದೆ. ಈ ಬಗೆಗಿನ ಅಂತಿಮ ನಿರ್ಧಾರವನ್ನು ಕೇಂದ್ರವೇ ತೆಗೆದುಕೊಳ್ಳಲಿದೆ.
ಈ ಬೆಳವಣಿಗೆಯನ್ನು ಯುಪಿಯ ಇಂಧನ ಸಚಿವ ಶ್ರೀಕಾಂತ್ ಶರ್ಮಾ ಅವರು ಖಚಿತಪಡಿಸಿದ್ದು, “ಇದೇ ಮೊದಲ ಬಾರಿಗೆ 600 ಭ್ರಷ್ಟ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದೆ ಮತ್ತು ಈ ನಿರ್ಧಾರವು ಗೇಮ್ ಚೇಂಜರ್ ಆಗಲಿದೆ” ಎಂದಿದ್ದಾರೆ.
ಜೂನ್ 20 ರಂದು ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ, ಭ್ರಷ್ಟ ಅಧಿಕಾರಿಗಳು ಮತ್ತು ಕರ್ತವ್ಯ ಲೋಪ ಎಸಗಿದ ಆರೋಪ ಹೊಂದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದರು ಎಂದಿದ್ದಾರೆ.
ಭ್ರಷ್ಟ ಮತ್ತು ಬೇಜವಾಬ್ದಾರಿ ಅಧಿಕಾರಿಗಳಿಗೆ ತಮ್ಮ ಸರ್ಕಾರದಲ್ಲಿ ಸ್ಥಾನವಿಲ್ಲ ಮತ್ತು ಅವರಿಗೆ ಬೇಗನೆ ಸ್ವಯಂಪ್ರೇರಿತ ನಿವೃತ್ತಿ ನೀಡಬೇಕು ಎಂದು ಸಿಎಂ ಸ್ಪಷ್ಟವಾಗಿ ಸೂಚಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.