ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ 2014-18ರ ಅವಧಿಯಲ್ಲಿ ಒಟ್ಟು 800 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಅವರು ಬುಧವಾರ ಲೋಕಸಭೆಗೆ ತಿಳಿಸಿದ್ದಾರೆ.
“2014 ರಲ್ಲಿ ಒಟ್ಟು 104 ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ, 2015 ರಲ್ಲಿ 97, 2016 ರಲ್ಲಿ 140, 2017 ರಲ್ಲಿ 210 ಮತ್ತು 2018 ರಲ್ಲಿ 249 ಉಗ್ರರನ್ನು ಹತ್ಯೆ ಮಾಡಲಾಗಿದೆ. ಭದ್ರತಾ ಪಡೆಗಳು ನಡೆಸಿದ ನಿರಂತರ ಸಂಘಟಿತ ಕಾರ್ಯಾಚರಣೆಗಳಿಂದಾಗಿ ಹೆಚ್ಚಿನ ಸಂಖ್ಯೆಯ ಉಗ್ರರನ್ನು ಸದೆ ಬಡಿಯಲು ಸಾಧ್ಯವಾಗಿದೆ “ಎಂದಿದ್ದಾರೆ.
ಬಿಜೆಪಿ ಸಂಸದ ನಿತೇಶ್ ಗಂಗಾ ದೇಬ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಭದ್ರತಾ ಪಡೆಗಳು ಒಳನುಸುಳುವಿಕೆಯನ್ನು ತಡೆಯಲು ಮತ್ತು ನಮ್ಮ ನೆಲದೊಳಗೆ ಭಯೋತ್ಪಾದಕ ಚಟುವಟಿಕೆಗಳು ನಡೆಯದಂತೆ ಮಾಡಲು ಹೋರಾಡುತ್ತಿವೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ನಿರಂತರಗೊಳಿಸಿವೆ ಮತ್ತು ಭಯೋತ್ಪಾದಕ ಕೃತ್ಯಗಳಿಗೆ ತಕ್ಕೆ ಉತ್ತರವನ್ನು ನೀಡುತ್ತಿವೆ” ಎಂದಿದ್ದಾರೆ.
ಈ ವರ್ಷ ಅಂದರೆ 2019ರಲ್ಲಿ ಇದುವರೆಗೆ ಜಮ್ಮು ಕಾಶ್ಮೀರದೊಳಗೆ 100 ಕ್ಕೂ ಅಧಿಕ ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.