ನವದೆಹಲಿ: ಮಳೆಯ ವಿಳಂಬದಿಂದ ಆತಂಕಕ್ಕೀಡಾಗಿರುವ ರೈತರಿಗೆ ನರೇಂದ್ರ ಮೋದಿ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. 2019-20ರ ಸಾಲಿಗೆ ಎಲ್ಲಾ ಖಾರೀಫ್ ಬೆಳೆಗಳಿಗೆ ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಳಗೊಳಿಸಿದೆ. ಜುಲೈ 2019 ರಿಂದ ಜೂನ್ 2020 ರ ವರೆಗೆ ಇದು ಅನ್ವಯವಾಗಲಿದೆ. ಭತ್ತದ ಮೇಲಿನ ಕನಿಷ್ಠ ಬೆಂಬಲ ಬೆಲೆಯನ್ನು ಶೇ. 3.7 ರಷ್ಟು ಹೆಚ್ಚಳ ಮಾಡಲಾಗಿದೆ. ಎಣ್ಣೆಬೀಜ, ಧಾನ್ಯಗಳು ಕೂಡ ಸಾಕಷ್ಟು ಏರಿಕೆಯನ್ನು ಕಂಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, “ಈ ವರ್ಷ ಮಾನ್ಸೂನ್ ವಿಳಂಬವಾಗಿದೆ ಮತ್ತು ಇದರಿಂದ ರೈತರಿಗೆ ಮಾತ್ರವಲ್ಲದೆ ಸರ್ಕಾರಕ್ಕೂ ಆತಂಕ ಉಂಟಾಗಿದೆ. ಆದರೆ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಪರಿಸ್ಥಿತಿ ಸುಧಾರಿಸುವ ಮತ್ತು ಮಾನ್ಸೂನ್ ಸಾಮಾನ್ಯವಾಗಿರುವ ಭರವಸೆ ಇದೆ” ಎಂದಿದ್ದಾರೆ.
ಸಮಿತಿಯ ನಿರ್ಧಾರದ ಪ್ರಕಾರ, ಜೊವರ್ನ ಕನಿಷ್ಠ ಬೆಂಬಲ ಬೆಲೆ ಕ್ವಿಂಟಾಲ್ಗೆ 120 ರೂ ಮತ್ತು ರಾಗಿಯ ಬೆಂಬಲ ಬೆಲೆ ಕ್ವಿಂಟಾಲ್ಗೆ 253 ರೂ. ಹೆಚ್ಚಿಸಲಾಗಿದೆ. ತೊಗರಿ ಬೇಳೆ, ಹೆಸರು ಬೇಳೆ ಮತ್ತು ಉದ್ದಿನ ಬೇಳೆಗಳ ಬೆಂಬಲ ಬೆಲೆಯನ್ನು 2019-20ರ ಅವಧಿಗೆ ಕ್ರಮವಾಗಿ ರೂ.215, ರೂ.75 ಮತ್ತು 100 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.