ನವದೆಹಲಿ: ರಾಷ್ಟ್ರ ವಿರೋಧಿಗಳನ್ನು, ಪ್ರತ್ಯೇಕತಾವಾದಿಗಳನ್ನು ಮತ್ತು ಭಯೋತ್ಪಾದಕರನ್ನು ಪರಿಣಾಮಕಾರಿಯಾಗಿ ಎದುರಿಸಲು ಅತ್ಯಗತ್ಯವಾಗಿರುವ ದೇಶದ್ರೋಹದ ಕಾನೂನನ್ನು ರದ್ದುಗೊಳಿಸುವ ಯಾವುದೇ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಬುಧವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
ಟಿಆರ್ಎಸ್ ಸಂಸದ ಬಂಡಾ ಪ್ರಕಾಶ್ ಅವರ ಲಿಖಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, “ದೇಶದ್ರೋಹದ ಅಪರಾಧವನ್ನು ನಿರ್ವಹಿಸುವ ಐಪಿಸಿ ಅಡಿಯಲ್ಲಿ ದೇಶದ್ರೋಹದ ಕಾನೂನನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾಪವಿಲ್ಲ. ರಾಷ್ಟ್ರ ವಿರೋಧಿಗಳನ್ನು, ಪ್ರತ್ಯೇಕತಾವಾದಿಗಳನ್ನು ಮತ್ತು ಭಯೋತ್ಪಾದಕರನ್ನು ಪರಿಣಾಮಕಾರಿಯಾಗಿ ಎದುರಿಸಲು ಈ ಕಾನೂನನ್ನು ಉಳಿಸಿಕೊಳ್ಳುವ ಅವಶ್ಯಕತೆಯಿದೆ” ಎಂದಿದ್ದಾರೆ.
ಲೋಕಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ, ಅಧಿಕಾರಕ್ಕೆ ಬಂದರೆ ದೇಶದ್ರೋಹದ ಕಾನೂನನ್ನು ತೆಗೆದುಹಾಕುವುದಾಗಿ ಭರವಸೆ ನೀಡಿತ್ತು. ಈ ಕ್ರಮವನ್ನು ಬಿಜೆಪಿ ತೀವ್ರವಾಗಿ ಖಂಡಿಸಿತ್ತು.
ಐಪಿಸಿಯ ಸೆಕ್ಷನ್ 124 ಎ ಅಡಿಯ ದೇಶದ್ರೋಹದ ಕಾನೂನು “ಯಾರು ಪದಗಳ ಮೂಲಕ, ಮಾತಿನ ಮೂಲಕ ಅಥವಾ ಬರವಣಿಗೆ ಅಥವಾ ಚಿಹ್ನೆ ಇತ್ಯಾದಿಗಳ ಮೂಲಕ ಸ್ಥಾಪಿತ ಸರ್ಕಾರದ ಬಗ್ಗೆ ಅಸಮಾಧಾನವನ್ನು, ದ್ವೇಷವನ್ನು ಪ್ರಚೋದಿಸಲು ಪ್ರಯತ್ನಿಸುತ್ತಾರೋ ಅಂತಹವರಿಗೆ ಸೆರೆವಾಸ ಮತ್ತು ದಂಡವನ್ನು ವಿಧಿಸಬಹುದು” ಎಂದು ಹೇಳುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.