ನವದೆಹಲಿ: ಅಪಾರ ಕನ್ನಡಿಗರ ಬೇಡಿಕೆಗೆ ಫಲ ಸಿಕ್ಕಿದೆ. ಕೇಂದ್ರ ಸರ್ಕಾರ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಇತರ ಪ್ರಾದೇಶಿಕ ಭಾಷೆಗಳಲ್ಲೂ ನಡೆಸಲು ನಿರ್ಧರಿಸಿದೆ. ಈ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಘೋಷಣೆ ಮಾಡಿದ್ದಾರೆ.
ಇನ್ನು ಮುಂದೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಯಲ್ಲಿ ಐಪಿಬಿಎಸ್ ಹಾಗೂ ಆರ್ಆರ್ಬಿ ಪರೀಕ್ಷೆಯನ್ನು ಬರೆಯಬಹುದು ಎಂದು ಸಚಿವೆ ತಿಳಿಸಿದ್ದಾರೆ.
ಲೋಕಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, ದೇಶದಲ್ಲಿ 45 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳಿದ್ದು, 90 ಸಾವಿರ ಜನರು ಉದ್ಯೋಗಿಗಳಿದ್ದಾರೆ. ಇವುಗಳಿಗೆ ಆರ್ಆರ್ಬಿ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ಐಬಿಪಿಎಸ್ ಪರೀಕ್ಷೆ ಮೂಲಕ ನೇಮಕಾತಿ ನಡೆಯುತ್ತಿದೆ. ಹೀಗಾಗಿ ಸ್ಥಳೀಯ ವಿದ್ಯಾರ್ಥಿಗಳಿಗೆ ಬ್ಯಾಂಕ್ನಲ್ಲಿ ಉದ್ಯೋಗ ಪಡೆಯುವ ಅವಕಾಶ ನೀಡುವ ನಿಟ್ಟಿನಲ್ಲಿ 13 ಸ್ಥಳಿಯ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ ಎಂದು ತಿಳಿಸಿದ್ದಾರೆ.
ಸ್ಥಳಿಯ ಭಾಷೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಜ್ಞಾನವನ್ನು ಹೊಂದಿರುತ್ತಾರೆ. ಹೀಗಾಗಿ ಅವರಿಗೆ ಸ್ಥಳಿಯ ಭಾಷೆಯಲ್ಲೇ ಆರ್ಆರ್ಬಿ ಮತ್ತು ಐಬಿಪಿಎಸ್ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುತ್ತಿದೆ ಎಂದಿದ್ದಾರೆ.
ಆರ್ಆರ್ಬಿಯ ನೇರ ನೇಮಕಾತಿ ಸ್ಕೇಲ್ 1 ಹಾಗೂ ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ವಿದ್ಯಾರ್ಥಿಗಳು ತಮ್ಮ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಬಹುದು. ಅಲ್ಲದೇ, ಐಬಿಪಿಎಸ್ ಪರೀಕ್ಷೆಗಳನ್ನು ಇಂಗ್ಲೀಷ್ ಹಾಗೂ ಹಿಂದಿಯ ಜೊತೆಗೆ ಕನ್ನಡ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕೊಂಕಣಿ, ಮಲೆಯಾಳಂ, ಮಣಿಪುರಿ, ಮರಾಠಿ, ಒರಿಯಾ, ಪಂಜಾಬಿ, ತಮಿಳು, ತೆಲುಗು ಹಾಗೂ ಉರ್ದು ಭಾಷೆಯಲ್ಲಿ ಬರೆಯಬಹುದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
Examination for Regional Rural Banks to be conducted in 13 regional languages: Smt @nsitharaman@PIB_India @MIB_India @BJPLive pic.twitter.com/eutp9Vp1BI
— NSitharamanOffice (@nsitharamanoffc) July 4, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.