ನವದೆಹಲಿ : 2019ರ ಲೋಕಸಭಾ ಚುನಾವಣೆಯ ಗೆಲುವಿನಿಂದ ಉತ್ಸಾಹವನ್ನು ಹೆಚ್ಚಿಸಿಕೊಂಡಿರುವ ಬಿಜೆಪಿ ಜುಲೈ 6 ರಿಂದ ಆಗಸ್ಟ್ 11 ರ ವರೆಗೆ ದೇಶವ್ಯಾಪಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರು ಜುಲೈ 6 ರಂದು ವಾರಣಾಸಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆಯನ್ನು ನೀಡಲಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಹಾಗೂ ಗೃಹಸಚಿವ ಅಮಿತ್ ಶಾ ಅವರು ತೆಲಂಗಾಣದಲ್ಲಿ ಅದೇ ದಿನ ಸದಸ್ಯತ್ವ ಅಭಿಯಾನಕ್ಕೆ ಚಾಲನೆಯನ್ನು ನೀಡಲಿದ್ದಾರೆ. ಕರ್ನಾಟಕದಲ್ಲಿ ಕೇಂದ್ರ ಸಚಿವ ವಿ. ಮುರಳೀಧರನ್ ಅವರು ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ಕರ್ನಾಟಕದಲ್ಲಿ ಸುಮಾರು 50 ಲಕ್ಷ ಸದಸ್ಯರನ್ನು ಹೊಂದುವ ಗುರಿಯನ್ನು ಕರ್ನಾಟಕ ಬಿಜೆಪಿ ಇಟ್ಟುಕೊಂಡಿದೆ. ಈ ಬಗ್ಗೆ ಮಾಹಿತಿಯನ್ನು ನೀಡಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು, “ರಾಜ್ಯದ 5 ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಸದಸ್ಯತ್ವ ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ. ಹೊಸ ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ಸಲುವಾಗಿ ಜುಲೈ 23 ರಿಂದ ಜುಲೈ 30 ರವರೆಗೆ 15,000 ಪಕ್ಷ ವಿಸ್ತಾರಕರು ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದಾರೆ. ಆಗಸ್ಟ್ 10 ರಿಂದ 15 ರವರೆಗೆ ವಿಸ್ತಾರಕರಿಗಾಗಿ ಕಾರ್ಯಾಗಾರವನ್ನು ಆಯೋಜಿಸಲಾಗುವುದು. ಪಕ್ಷಕ್ಕೆ 25 ಹೊಸ ಸದಸ್ಯರನ್ನು ಸೇರಿಸುವವರನ್ನು ಕ್ರಿಯಾಶೀಲ ಸದಸ್ಯರೆಂದು ಗುರುತಿಸಲಾಗುತ್ತದೆ. ಪಕ್ಷದಲ್ಲಿ 2 ಲಕ್ಷಕ್ಕೂ ಅಧಿಕ ಕ್ರಿಯಾಶೀಲ ಸದಸ್ಯರನ್ನು ಹೊಂದುವುದು ನಮ್ಮ ಗುರಿ” ಎಂದಿದ್ದಾರೆ.
ಸದಸ್ಯತ್ವ ಅಭಿಯಾನದ ವೇಳೆ ಬಿಜೆಪಿಯ ನೆಲೆ ದುರ್ಬಲವಾಗಿರುವ ಕ್ಷೇತ್ರಗಳ ಮೇಲೆಯೇ ಹೆಚ್ಚಿನ ಗಮನವನ್ನು ನೀಡಲಾಗುವುದು. ಹಿಂದಿನ ಚುನಾವಣೆಗಳನ್ನು ಬಿಜೆಪಿ ಸೋತಿರುವ ಪ್ರದೇಶಗಳ ಮೇಲೆ ಹೆಚ್ಚಿನ ಗಮನವನ್ನು ನೀಡಲಾಗುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.