ನವದೆಹಲಿ: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್ಆರ್ಡಿ) ಸಚಿವಾಲಯವು ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ (ಎನ್ಆರ್ಎಫ್)ವನ್ನು ರಚಿಸುವಲ್ಲಿ ಕಾರ್ಯನಿರ್ವಹಿಸುತ್ತಿದೆ. ಅಲ್ಲದೇ ಇದನ್ನು ಸಂಸತ್ತಿನ ಕಾಯ್ದೆಯ ಮೂಲಕ ರಚಿಸಲ್ಪಟ್ಟ ಆಯೋಗವಾಗಿ ಮತ್ತು ಪ್ರಧಾನ ಮಂತ್ರಿಯ ನೇತೃತ್ವದಲ್ಲಿ ಇದನ್ನು ಇಡುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ.
ಅಮೆರಿಕಾದ ನ್ಯಾಷನಲ್ ಸೈನ್ಸ್ ಫೌಂಡೇಶನ್ ಮಾದರಿಯಲ್ಲಿಯೇ ಸಂಶೋಧನೆಯನ್ನು ಬೆಳೆಸುವುದು ಎನ್ಆರ್ಎಫ್ ಉದ್ದೇಶವಾಗಿದೆ, ಆದರೂ ಇದು ವಿಶ್ವವಿದ್ಯಾನಿಲಯಗಳು ಮತ್ತು ಪ್ರಧಾನ ಶಿಕ್ಷಣ ಸಂಸ್ಥೆಗಳ ಮೂಲಕವೇ ಕಾರ್ಯವನ್ನು ಮಾಡಲಿದೆ.
ಸರ್ಕಾರದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, “ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್, ಮಾಜಿ ಕಂದಾಯ ಕಾರ್ಯದರ್ಶಿ ಹಸ್ಮುಖ್ ಅಧಿಯಾ, ಪ್ರಧಾನಮಂತ್ರಿಯ ಪ್ರಧಾನ ವೈಜ್ಞಾನಿಕ ಸಲಹೆಗಾರ ಕೆ. ವಿಜಯರಾಘವನ್, ಇಸ್ರೋ ಮಾಜಿ ಮುಖ್ಯಸ್ಥ ಕೆ. ಕಸ್ತೂರಿರಂಗನ್ , ಮಾಜಿ ಇನ್ಫೋಸಿಸ್ ಸಿಇಒ ಕ್ರಿಸ್ ಗೋಪಾಲಕೃಷ್ಣನ್ ಮತ್ತು ಉನ್ನತ ಶಿಕ್ಷಣ ಕಾರ್ಯದರ್ಶಿ ಆರ್. ಸುಬ್ರಹ್ಮಣ್ಯಂ ನೇತೃತ್ವದ ಉನ್ನತ ಮಾನವ ಸಂಪನ್ಮೂಲ ಅಧಿಕಾರಿಗಳು ಎನ್ಆರ್ಎಫ್ ಅನ್ನು ಸ್ಥಾಪಿಸುವ ಬಗ್ಗೆ ಸಚಿವಾಲಯಕ್ಕೆ ವಿವರವಾದ ಯೋಜನೆಯನ್ನು ನೀಡಿದ್ದಾರೆ.
ಸಚಿವಾಲಯದ ಶಿಕ್ಷಣ ಗುಣಮಟ್ಟ ಉನ್ನತೀಕರಣ ಮತ್ತು ಅಂತರ್ಗತ ಕಾರ್ಯಕ್ರಮ (ಇಕ್ಯೂಐಐಪಿ)ದ ಅಡಿಯಲ್ಲಿ ಈ ತಜ್ಞರು ಸಲ್ಲಿಸಿದ ವರದಿಯ ಪ್ರಕಾರ, ಎನ್ಆರ್ಎಫ್ ಸಂಸತ್ತಿನ ಕಾಯಿದೆಯೊಂದರಿಂದ ಆಯೋಗವಾಗಬೇಕು ಮತ್ತು ಜ್ಞಾನ ರಚನೆ ಮತ್ತು ಸಂಶೋಧನೆ ಮತ್ತು ನಾವೀನ್ಯತೆ ಮೂಲಸೌಕರ್ಯಗಳಲ್ಲಿ ಶ್ರೇಷ್ಠತೆಯನ್ನು ಸಾಧಿಸುವ ಗುರಿಯನ್ನು ಹೊಂದಿರಬೇಕು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.