ನವದೆಹಲಿ: ಇಲ್ಲಿಯವರಿಗೆ ಪ್ರತಿ ಹಣಕಾಸು ಸಚಿವರುಗಳು ಬಜೆಟ್ ಮಂಡಿಸಲು ಸಂಸತ್ತಿಗೆ ಪ್ರವೇಶಿಸುವಾಗ ಸೂಟ್ಕೇಸ್ನಲ್ಲಿ ಬಜೆಟ್ ಪ್ರತಿಯನ್ನು ಹೊತ್ತುಕೊಂಡು ಬರುತ್ತಿದ್ದರು. ಆದರೆ ಈ ಸೂಟ್ಕೇಸ್ ಸಂಪ್ರದಾಯಕ್ಕೆ ನಿರ್ಮಲಾ ಸೀತಾರಾಮನ್ ಅವರು ತಿಲಾಂಜಲಿ ಇಟ್ಟಿದ್ದಾರೆ. ಇಂದು ಅವರು ಕೆಂಪು ಬಣ್ಣದ ಬಟ್ಟೆಯಲ್ಲಿ ಬಜೆಟ್ ಪ್ರತಿಗಳನ್ನು ಇಟ್ಟುಕೊಂಡು ಸಂಸತ್ ಪ್ರವೇಶಿಸಿದ್ದಾರೆ.
ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವಾಲಯಕ್ಕೆ ಆಗಮಿಸಿದ ಅವರು, ಬಜೆಟ್ ದಾಖಲೆಗಳನ್ನು ಸೂಟ್ಕೇಸ್ ಬದಲು ಕೆಂಪು ಬಣ್ಣದ ಬಟ್ಟೆಯಲ್ಲಿ ಇಟ್ಟು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಈ ವೇಳೆ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಹಾಗೂ ಹಣಕಾಸು ಸಚಿವಾಲಯದ ಇತರು ಉಪಸ್ಥಿತರಿದ್ದರು.
ಕೆಂಪುಬಟ್ಟೆಯಲ್ಲಿ ಬಜೆಟ್ಗೆ ಸಂಬಂಧಪಟ್ಟ ದಾಖಲೆಗಳನ್ನು ಇಟ್ಟು ಆ ಬಟ್ಟೆಯನ್ನು ನಾಲ್ಕು ಮಡಿಕೆ ಮಾಡಿ ರಿಬ್ಬನ್ನಿಂದ ಕಟ್ಟಲಾಗಿದೆ. ಅದರ ಮೇಲೆ ರಾಷ್ಟ್ರಲಾಂಛನವಾದ ನಾಲ್ಕು ಮುಖದ ಸಿಂಹದ ಚಿತ್ರವಿದೆ. ಈ ಬಟ್ಟೆ ನೋಡಲು ಅತ್ಯಂತ ಆಕರ್ಷಕವಾಗಿತ್ತು.
ನಿರ್ಮಲಾ ಸೀತಾರಾಮನ್ ಅವರು ಭಾರತದ ಮೊದಲ ಪೂರ್ಣಾವಧಿಯ ಮಹಿಳಾ ಹಣಕಾಸು ಸಚಿವೆಯಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಹ್ಮಣಿಯನ್ ಅವರು, ಬಟ್ಟೆಯಲ್ಲಿ ಅಮೂಲ್ಯವಾದುದನ್ನು ಕಟ್ಟುವುದು ನಮ್ಮ ದೇಶದ ಸಂಪ್ರದಾಯ. ಪಾಶ್ಚಾತ್ಯ ಸಂಸ್ಕೃತಿಯಿಂದ ಹೊರಬರಲು ಈ ಬಾರಿ ಸೂಟ್ ಕೇಸ್ ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.
ಸಂಸತ್ತು ಪ್ರವೇಶಿಸುವ ಮುನ್ನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಸಚಿವೆ ಭೇಟಿಯಾಗಿದ್ದರು. ಬಜೆಟ್ ಮಂಡಿಸಿದ ಬಳಿಕ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.