ಹೈದರಾಬಾದ್: ಹೈಸ್ಕೂಲ್ಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಿಕೊಡುವ ತಾಯಂದಿರಿಗೆ ವಾರ್ಷಿಕ ರೂ. 15,000 ಧನಸಹಾಯವನ್ನು ನೀಡಲು ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಅಮ್ಮ ವೋದಿ ಯೋಜನೆಯಡಿಯಲ್ಲಿ ಈ ಹಣವನ್ನು ನೀಡಲಾಗುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
“ವಿದ್ಯಾರ್ಥಿಗಳು ಪದವಿ ಮುಗಿದ ಕೂಡಲೇ ಉದ್ಯೋಗ ಭದ್ರಪಡಿಸಿಕೊಳ್ಳುವ ಸಾಮರ್ಥ್ಯ ಪಡೆಯುವಂತಾಗಬೇಕು. ಉದ್ಯಮದ ಅವಶ್ಯಕತೆಗೆ ಅನುಗುಣವಾಗಿ ಶಿಕ್ಷಣ ಮಾನದಂಡಗಳನ್ನು ಅಭಿವೃದ್ಧಿಪಡಿಸಲು ನಾವು ಬಯಸುತ್ತೇವೆ. ಎಲ್ಲರಿಗೂ ಶಿಕ್ಷಣವನ್ನು ಖಾತ್ರಿಪಡಿಸಿಕೊಳ್ಳಲು ನಾವು ಅಮ್ಮ ವೋದಿಯಂತಹ ಯೋಜನೆಗಳನ್ನು ಮತ್ತು ಶೇ.100 ಶುಲ್ಕ ಮರುಪಾವತಿಯನ್ನು ನೀಡುತ್ತಿದ್ದೇವೆ ”ಎಂದು ಜಗನ್ ತಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಬಗ್ಗೆ ವಿವರಿಸಿದ್ದಾರೆ.
ಈ ಯೋಜನೆಗೆ ಎಷ್ಟೇ ವೆಚ್ಚವಾದರೂ ಸರಿ ಅನುಷ್ಠಾನಗೊಳಿಸಲು ಸಂಪೂರ್ಣ ಸಿದ್ಧವಾಗಿದ್ದೇವೆ ಎಂದಿರುವ ಅವರು, ಯೋಜನೆಯ ನೀಲನಕ್ಷೆ ತಯಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದಿದ್ದಾರೆ.
ರಾಜ್ಯಕ್ಕೆ ಶಿಕ್ಷಣ ನೀತಿಯನ್ನು ರೂಪಿಸಲು ರಚಿಸಲಾದ ತಜ್ಞರ ಸಮಿತಿಯ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್ಆರ್ಡಿ) ಸಚಿವ ಆದಿಮುಲಾಪು ಸುರೇಶ್, “ಅಮ್ಮನ ವೋದಿ ಯೋಜನೆಯ ಅಡಿಯಲ್ಲಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವ ಮಹಿಳೆಯರಿಗೆ ಸರ್ಕಾರ ವರ್ಷಕ್ಕೆ 15 ಸಾವಿರ ರೂ. ನೀಡಲಿದೆ” ಎಂದಿದ್ದಾರೆ.
ಬೆಂಗಳೂರಿನ ಭಾರತೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಾಧ್ಯಾಪಕ ಎನ್.ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.