ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿರುವ ಇಕ್ಬಾಲ್ ಮಲಿಕ್ ಮತ್ತು ಇತರ ಕಾಂಗ್ರೆಸ್ ಸದಸ್ಯರು ಜಮ್ಮುವಿನಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ರಾಮ್ ಮಾಧವ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಮಲಿಕ್ ಮತ್ತು ಅವರ ಬೆಂಬಲಿಗರು ಸೇರಿದಂತೆ, ಹಲವಾರು ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರು ಮತ್ತು ಬ್ಲಾಕ್ ಅಧ್ಯಕ್ಷರು ಸೇರಿದಂತೆ ಸರ್ಪಂಚ್ ಮತ್ತು ಪಂಚಗಳು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಅವರನ್ನು ರಾಮ್ ಮಾಧವ್, ಜಮ್ಮು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಮತ್ತು ಮಾಜಿ ಉಪಮುಖ್ಯಮಂತ್ರಿ ನಿರ್ಮಲ್ ಸಿಂಗ್ ಪಕ್ಷಕ್ಕೆ ಸ್ವಾಗತಿಸಿದರು.
“ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಇಕ್ಬಾಲ್ ಮಲಿಕ್ ಅವರು ಬಿಜೆಪಿಯನ್ನು ಸೇರ್ಪಡೆಗೊಳ್ಳಲು ನಿರ್ಧರಿಸಿದ್ದು ಅತ್ಯಂತ ಜಾಣ ನಿರ್ಧಾರವಾಗಿದೆ. ಬಿಜೆಪಿಗೆ ಸೇರಿದ ಪ್ರತಿಯೊಬ್ಬರನ್ನೂ ನಾನು ಸ್ವಾಗತ ಮಾಡುತ್ತೇನೆ” ಎಂದು ರಾಮ್ ಮಾಧವ್ ಹೇಳಿದ್ದಾರೆ.
“ಇವರ ಸೇರ್ಪಡೆಯಿಂದ ಜಮ್ಮು ಕಾಶ್ಮೀರದಲ್ಲಿ ನಮ್ಮ ಬಲ ವೃದ್ಧಿಯಾಗಿದೆ. ಒಗ್ಗಟ್ಟಾಗಿ ನಾವು ಕಣಿವೆ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿಜಯ ಪತಾಕೆ ಹಾರಿಸುತ್ತೇವೆ” ಎಂದಿದ್ದಾರೆ.
ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದ ಅವರು, ಪ್ರತಿಪಕ್ಷಗಳು ನಮ್ಮ ಬಗ್ಗೆ ಅಲ್ಪಸಂಖ್ಯಾತ ಸಮುದಾಯದಲ್ಲಿ ಭಯವನ್ನು ಹುಟ್ಟಿಸಿವೆ. ಬಿಜೆಪಿ ಎಲ್ಲರನ್ನೂ ಮುಂದೆ ತೆಗೆದುಕೊಂಡು ಹೋಗುವಲ್ಲಿ ನಂಬಿಕೆ ಇಟ್ಟಿದೆ ಮತ್ತು ಎಲ್ಲಾ ಸಮುದಾಯವನ್ನು ಸಮಾನವಾಗಿ ನೋಡುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.