ಮುಂಬಯಿ: ಭಾರತೀಯ ಕ್ರಿಕೆಟ್ ಲೋಕದ ತಾರೆ, ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಬಿಸಿಸಿಐಯು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿರುವ ಎನ್ಸಿಎನಲ್ಲಿ ದ್ರಾವಿಡ್ ಕಾರ್ಯ ನಿರ್ವಹಿಸಲಿದ್ದಾರೆ. ಆಟಗಾರರು, ಕೋಚ್ಗಳಿಗೆ ಮಾರ್ಗದರ್ಶನ ನೀಡುವ, ತರಬೇತಿ ನೀಡುವ, ಸ್ಫೂರ್ತಿ ತುಂಬುವ ಕಾರ್ಯಗಳಲ್ಲಿ ಅವರು ಇನ್ನು ಮುಂದೆ ತೊಡಗಿಸಿಕೊಳ್ಳಲಿದ್ದಾರೆ.
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿ ಆಯ್ಕೆಯಾಗಿರುವ ದ್ರಾವಿಡ್ ಅವರು, ಇನ್ನು ಮುಂದೆ ರಾಷ್ಟ್ರೀಯ ಪುರುಷ ಹಾಗೂ ಮಹಿಳಾ ತಂಡಗಳ ಪ್ರಧಾನ ಕೋಚ್ಗಳ ಜತೆಯೂ ನಿರಂತರ ಸಂಪರ್ಕದಲ್ಲಿದ್ದು, ಅವರಿಗೆ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ
ಭಾರತ ‘ಎ’, ಅಂಡರ್-19, ಅಂಡರ್-23 ತಂಡಗಳ ಪ್ರದರ್ಶನಗಳ ಮೇಲೆಯೂ ದ್ರಾವಿಡ್ ಗಮನವಿಡಲಿದ್ದಾರೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ರಾಹುಲ್ ದ್ರಾವಿಡ್ ಮಾರ್ಗದರ್ಶನಲ್ಲಿ ಭಾರತದ ಕಿರಿಯರ ತಂಡ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.