ನವದೆಹಲಿ: ಜುಲೈ 5 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆಗೊಳಿಸಿರುವ ಬಜೆಟ್ನಲ್ಲಿ ರೈತರಿಗೆ ಯಾವುದೇ ಪರಿಹಾರ ಯೋಜನೆಗಳನ್ನು ಘೋಷಣೆ ಮಾಡಲಾಗಿಲ್ಲ, ದೇಶದಲ್ಲಿ ರೈತರ ಪರಿಸ್ಥಿತಿ ಹದಗೆಡುತ್ತಿದೆ ಎಂದು ಲೋಕಸಭೆಯಲ್ಲಿ ಆರೋಪಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೀಕ್ಷ್ಣ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ರೈತರು ಇಂದು ಅನುಭವಿಸುತ್ತಿರುವ ಪರಿಸ್ಥಿತಿಗೆ ದಶಕಗಳಿಂದ ದೇಶವನ್ನು ಆಳಿದ ಕಾಂಗ್ರೆಸ್ ಕಾರಣ ಎಂದು ರಾಜನಾಥ್ ಸಿಂಗ್ ತಿರುಗೇಟು ನೀ ಡಿದ್ದಾರೆ.
ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಹೆಚ್ಚು ರೈತರ ಆತ್ಮಹತ್ಯೆಗಳು ನಡೆದಿವೆ ಎಂದು ಸಿಂಗ್ ಹೇಳಿದ್ದಾರೆ. ಮೋದಿ ಸರ್ಕಾರದ ಪ್ರಯತ್ನಗಳ ನಂತರ ರೈತರ ಆದಾಯವು ಶೇಕಡಾ 20-25ರಷ್ಟು ಹೆಚ್ಚಾಗಿದೆ ಎಂದಿದ್ದಾರೆ.
ಅಲ್ಲದೇ, 2008ರಲ್ಲಿ ಯುಪಿಎ ಸರ್ಕಾರವು ರೈತರ ರೂ.70,000 ಕೋಟಿ ಸಾಲಮನ್ನಾವನ್ನು ಘೋಷಣೆ ಮಾಡಿದ ಬಳಿಕ ದೇಶದಲ್ಲಿ ರೈತರ ಆತ್ಮಹತ್ಯಾ ಪ್ರಕರಣಗಳು ಹೆಚ್ಚಾದವು ಎಂದು ಬಿಜೆಪಿ ಲೋಕಸಭೆಯಲ್ಲಿ ನೇರ ಆಪಾದನೆ ಮಾಡಿದೆ.
“2008ರಲ್ಲಿ ಯುಪಿಎ ಸಾಲಮನ್ನಾ ಘೋಷಣೆ ಮಾಡಿದ ಬಳಿಕ ರೈತರ ಆತ್ಮಹತ್ಯಾ ಪ್ರಕರಣಗಳು ಹೆಚ್ಚಾಗಿವೆ ಎಂಬುದನ್ನು ವರದಿಗಳು ತೋರಿಸುತ್ತಿವೆ ” ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಪುರುಷೋತ್ತಮ್ ರೂಪಾಲ ತಿಳಿಸಿದ್ದಾರೆ. ಸಾಲಮನ್ನಾ ಯೋಜನೆಯಡಿ ರೈತರಲ್ಲದವರ ಸಾಲಗಳನ್ನೂ ಮನ್ನಾ ಮಾಡಲಾಗಿತ್ತು ಎಂಬುದು ತಿಳಿದು ಬಂದಿದೆ ಎಂದಿದ್ದಾರೆ.
ವಯನಾಡಿನಲ್ಲಿ ನಿನ್ನೆ ಒಬ್ಬ ರೈತ ಸಾಲದಿಂದಾಗಿ ಆತ್ಮಹತ್ಯೆ ಮಾಡಿದ ಪ್ರಕರಣವನ್ನು ಉಲ್ಲೇಖಿಸಿ ರಾಹುಲ್ ಮಾತನಾಡಿದ್ದರು. ಬ್ಯಾಂಕುಗಳು ರೈತರಿಗೆ ಬೆದರಿಕೆಯನ್ನು ಹಾಕದಂತೆ ನೋಡಿಕೊಳ್ಳಬೇಕು ಎಂದು ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.