ನವದೆಹಲಿ: ಬಿಜೆಪಿಯ ಮಹಿಳಾ ಸಂಸದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಭೆ ನಡೆಸುತ್ತಿದ್ದಾರೆ. ಪ್ರಧಾನಿಯವರ ಅಧಿಕೃತ ನಿವಾಸದಲ್ಲಿ ಈ ಬಹುನಿರೀಕ್ಷಿತ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಪಕ್ಷದ ಮೂಲಗಳ ಪ್ರಕಾರ, ಪ್ರಧಾನ ಮಂತ್ರಿ ಮತ್ತು ಬಿಜೆಪಿ ಸಂಸದರ ನಡುವೆ ನಡೆಯುತ್ತಿರುವ ಐದನೇಯ ಸಂವಾದ ಸಭೆ ಇದಾಗಿದೆ. ಆಡಳಿತಾರೂಢ ಬಿಜೆಪಿಯು ತನ್ನ ಸಂಸದರು ಮತ್ತು ಸರ್ಕಾರದ ನಡುವೆ ಉತ್ತಮ ಹೊಂದಾಣಿಕೆಯನ್ನು ತರುವ ಸಲುವಾಗಿ ಸರಣಿ ಸಭೆಗಳನ್ನು ಆಯೋಜನೆಗೊಳಿಸುತ್ತಾ ಬಂದಿದೆ. ಅದರ ಭಾಗವಾಗಿ ಇಂದು ಮೋದಿಯವರು ಮಹಿಳಾ ಸಂಸದರೊಂದಿಗೆ ಸಭೆ ನಡೆಸುತ್ತಿದ್ದಾರೆ.
ಪ್ರಧಾನಮಂತ್ರಿಯೊಂದಿಗೆ ಸಂಸದರ ಏಳು ಸಭೆಗಳನ್ನು ನಡೆಸಲು ಬಿಜೆಪಿ ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.
ಸಂಸದರನ್ನು ಏಳು ಗುಂಪುಗಳಾಗಿ ವಿಂಗಡಿಸಲಾಗಿದೆ ಮತ್ತು ಪ್ರಧಾನಿ ಮೋದಿ ಈಗಾಗಲೇ ಒಬಿಸಿ, ಎಸ್ಸಿ ಮತ್ತು ಎಸ್ಟಿ ವರ್ಗಗಳಿಗೆ ಸೇರಿದ ಪಕ್ಷದ ಸಂಸದರ ಜೊತೆಗೆ ಸಭೆ ನಡೆಸಿದ್ದಾರೆ. ಮಾತ್ರವಲ್ಲದೇ ಮೊದಲ ಬಾರಿಗೆ ಸಚಿವರಾಗಿರುವವರ ಜೊತೆಯೂ ಸಭೆಯನ್ನು ನಡೆಸಿದ್ದಾರೆ.
ಉಭಯ ಸದನಗಳ ಬಿಜೆಪಿ ಸಂಸದರು ಪ್ರಧಾನಮಂತ್ರಿಯೊಂದಿಗೆ ನೇರವಾಗಿ ಸಂವಹನ ನಡೆಸಲು ಅವಕಾಶವನ್ನು ಪಡೆದುಕೊಳ್ಳಲಿ ಎಂಬ ಉದ್ದೇಶದೊಂದಿಗೆ ಈ ಸಭೆಗಳನ್ನು ನಡೆಸಲಾಗುತ್ತಿದೆ. ಇಲ್ಲಿ ಮೋದಿ ಅವರಿಗೆ ಮಾರ್ಗದರ್ಶನ ನೀಡುತ್ತಾರೆ ಮತ್ತು ವಿವಿಧ ವಿಷಯಗಳ ಬಗ್ಗೆ ಅದರಲ್ಲೂ ವಿಶೇಷವಾಗಿ ಸಂಸತ್ತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.