ನವದೆಹಲಿ: ಐಐಟಿಗಳು ಸೇರಿದಂತೆ ದೇಶದ ಪ್ರಖ್ಯಾತ ಎಂಜಿನಿಯರಿಂಗ್ ಸಂಸ್ಥೆಗಳು, ರಕ್ಷಣಾ ಕ್ಷೇತ್ರಕ್ಕಾಗಿ ಕೇಂದ್ರವು ಆರಂಭಿಸಿರುವ ಮೇಕ್ ಇನ್ ಇಂಡಿಯಾ ಯೋಜನೆಗೆ ಕೊಡುಗೆ ನೀಡಬೇಕು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ಅವರು ಎಲ್ಲಾ ಐಐಟಿ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ರಕ್ಷಣಾ ಮತ್ತು ಬಾಹ್ಯಾಕಾಶ ಕ್ಷೇತ್ರಗಳಿಗೆ ಸೇರಿದ ಸದಸ್ಯರೊಂದಿಗೆ ಈ ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಂಡಿರುವ ಒಂದು ಪ್ರಮುಖ ತಂಡವನ್ನು ರಚಿಸಲು ಕೇಂದ್ರವು ಯೋಜನೆ ರೂಪಿಸಿದೆ ಎನ್ನಲಾಗಿದೆ.
“ಐಐಟಿಗಳು ಮತ್ತು ಐಐಐಟಿಗಳು ಸರ್ಕಾರಿ ಅನುದಾನಿತ ಸಂಸ್ಥೆಗಳು, ಆದ್ದರಿಂದ ಅವು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂಬುದು ನಮ್ಮ ನಿರೀಕ್ಷೆಯಾಗಿದೆ” ಎಂದು ಮಾನವ ಸಂಪನ್ಮೂಲ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ರಕ್ಷಣೆಯನ್ನು ದೇಶೀಕರಣಗೊಳಿಸುವಲ್ಲಿ ಈ ಸಂಸ್ಥೆಗಳ ಪರಿಣತಿಯನ್ನು ಬಳಸಿಕೊಳ್ಳಲು ನಿಖರವಾದ ಯೋಜನೆಯನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುತ್ತಿದೆ.
ಪ್ರಸ್ತುತ, ಭಾರತೀಯ ಶಸ್ತ್ರಾಸ್ತ್ರ ಉದ್ಯಮವು ಇನ್ನೂ ಆರಂಭಿಕ ಹಂತದಲ್ಲಿದೆ, ಸಶಸ್ತ್ರ ಪಡೆಗಳು ತಮ್ಮ ಅರ್ಧದಷ್ಟು ಅಗತ್ಯಗಳನ್ನು ಪೂರೈಸಲು ಆಮದನ್ನು ಅವಲಂಬಿಸಿವೆ. ಇಲ್ಲಿಯವರೆಗೂ ರಕ್ಷಣಾ ಜ್ಞಾನವನ್ನು ಸ್ಥಾಪಿಸುವ ಸಲುವಾಗಿ ‘ಮೇಕ್ ಇನ್ ಇಂಡಿಯಾ’ ಯೋಜನೆಯಡಿಯಲ್ಲಿ ವಿದೇಶಿ ತಯಾರಕರು ಮತ್ತು ಭಾರತೀಯ ಸಂಸ್ಥೆಗಳ ನಡುವೆ ಕಾರ್ಯತಂತ್ರಿಕ ಸಹಭಾಗಿತ್ವವನ್ನು ಸೃಷ್ಟಿಸಲಾಗುತ್ತಿದೆ.
ಭಾರತವು ತನ್ನದೇ ಆದ ರಕ್ಷಣಾ ವ್ಯವಸ್ಥೆಗಳನ್ನು ಹೊಂದಲು ಐಐಟಿಗಳು, ಐಐಐಟಿಗಳು ಕೊಡುಗೆ ನೀಡಬೇಕು ಎಂಬುದು ಕೇಂದ್ರ ಸರ್ಕಾರ ಆಶಯವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.