ನವದೆಹಲಿ: ಕೂಲಿ ಕೆಲಸಕ್ಕಾಗಿ ಒಂದು ಊರಿನಿಂದ ಇನ್ನೊಂದು ಊರಿಗೆ ವಲಸೆ ಹೋಗುವ ಕುಟುಂಬಗಳು ಕೆಲವೊಮ್ಮೆ ತಮ್ಮ ಒಂದು ತಿಂಗಳ ಪಡಿತರವನ್ನು ಕಳೆದುಕೊಳ್ಳುತ್ತವೆ. ಇನ್ನು ಮುಂದೆ ಹೀಗಾಗಬಾರದು ಎಂಬ ಉದ್ದೇಶದಿಂದ ಫುಡ್ ಕಾರ್ಪೋರೇಶನ್ ಆಫ್ ಇಂಡಿಯಾ (FCI)ವು ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಸುಧಾರಣೆಯನ್ನು ತರಲು ಮುಂದಾಗಿದೆ. ಇದರನ್ವಯ ರೇಷನ್ ಕಾರ್ಡ್ ಅನ್ನು ಪೋರ್ಟಬಲ್ ಮಾಡಲಿದೆ.
ಆಹಾರ ಭದ್ರತಾ ಕಾಯ್ದೆಯಡಿ, ಫಲಾನುಭವಿಗಳಿಗೆ ಅತ್ಯಂತ ಅಗ್ಗದ ದರದಲ್ಲಿ ಆಹಾರ ಸಾಮಾಗ್ರಿಗಳನ್ನು ಒದಗಿಸಲಾಗುತ್ತದೆ. ಓರ್ವ ವ್ಯಕ್ತಿಗೆ ತಿಂಗಳಿಗೆ ತಲಾ 5 ಕೆಜಿ ಆಹಾರ ಧಾನ್ಯಗಳನ್ನು ತಲಾ ಕೆಜಿಗೆ ರೂ.2-3 ಸಬ್ಸಿಡಿ ದರದಲ್ಲಿ ಒದಗಿಸಲಾಗುತ್ತದೆ.
ಸೆಪ್ಟೆಂಬರ್ ವೇಳೆಗೆ, ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಚೆನ್ನೈ ಮುಂತಾದ ಯಾವುದೇ ಹೆಚ್ಚು ಪ್ರಮಾಣದ ವಲಸಿಗ ಜನಸಂಖ್ಯೆಯನ್ನು ಹೊಂದಿರುವ ನಗರಗಳಲ್ಲಿ ಕೆಲಸ ಮಾಡುವ ದೇಶದ ಯಾವುದೇ ಭಾಗದ ಬಡ ವಲಸೆ ಕಾರ್ಮಿಕರು ಅಥವಾ ಕುಟುಂಬಗಳು ವಿಶೇಷ ನಿಬಂಧನೆಗಳ ಅಡಿಯಲ್ಲಿ ಈ ಸ್ಥಳಗಳಿಂದ ತಮ್ಮ ಪಡಿತರವನ್ನು ಪಡೆಯಲು ಸಾಧ್ಯವಾಗಲಿದೆ.
ಅಲ್ಲದೆ, 2020ರ ಜೂನ್ 30ರ ವೇಳೆಗೆ, ಆಹಾರ ಸಚಿವಾಲಯವು ಪಡಿತರ ಚೀಟಿಗಳನ್ನು ಸಂಪೂರ್ಣವಾಗಿ ರಾಷ್ಟ್ರವ್ಯಾಪಿಯಾಗಿ ಪೋರ್ಟಬಲ್ ಮಾಡಲಿದೆ. ಇದರನ್ವಯ ಯಾವುದೇ ಫಲಾನುಭವಿ ವ್ಯಕ್ತಿಯು ರಾಜ್ಯದ ಯಾವುದೇ ಪಡಿತರ ಅಂಗಡಿಯಿಂದ ತನ್ನ ಪಡಿತರವನ್ನು ಪಡೆದುಕೊಳ್ಳಬಹುದಾಗಿದೆ. ಒಂದು ಕಡೆಯಿಂದ ಇನ್ನೊಂದು ಕಡೆಗೆ ವಲಸೆ ಹೋಗುವ ಬಡ ಕುಟುಂಬಗಳಿಗೆ ಇದರಿಂದ ಸಾಕಷ್ಟು ಪ್ರಯೋಜನವಾಗಲಿದೆ.
ಹೆಚ್ಚು ಪ್ರಮಾಣದ ವಲಸಿಗ ಜನಸಂಖ್ಯೆಯನ್ನು ಹೊಂದಿರುವ ನಗರಗಳಲ್ಲಿ ಪಡಿತರ ವಿತರಣೆಗೆ ವಿಶೇಷ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಆಹಾರ ಸಚಿವಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ವಿಶೇಷ ಸೂಚನೆಗಳನ್ನು ನೀಡಿದೆ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.