ಡೆಹ್ರಾಡೂನ್: ಸುಸ್ಥಿರ ಅಭಿವೃದ್ಧಿಯನ್ನು ಪ್ರಮುಖವಾಗಿ ಗಮನದಲ್ಲಿಟ್ಟುಕೊಂಡು ಉತ್ತರಾಖಂಡ ರಾಜ್ಯ ಇದೇ ಮೊದಲ ಬಾರಿಗೆ ಹಿಮಾಲಯ ರಾಜ್ಯಗಳ ಸಮಾವೇಶವನ್ನು ಆಯೋಜನೆಗೊಳಿಸುತ್ತಿದೆ. ಜುಲೈ 28 ರಂದು ಮುಸ್ಸೂರಿಯಲ್ಲಿ ಸಮಾವೇಶ ಜರುಗಲಿದ್ದು, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಸಿಕ್ಕಿಂ, ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್, ತ್ರಿಪುರ, ಮಿಜೋರಾಂನ ಮುಖ್ಯಮಂತ್ರಿಗಳು, ಆಡಳಿತಗಾರರು ಮತ್ತು ತಜ್ಞರು ಇದರಲ್ಲಿ ಭಾಗವಹಿಸಲಿದ್ದಾರೆ.
ಪರಿಸರ ಸಂರಕ್ಷಣೆ, ಹಿಮಾಲಯನ್ ಸಂಸ್ಕೃತಿ ಮತ್ತು ಆರ್ಥಿಕ ಅಭಿವೃದ್ಧಿಯ ಬಗ್ಗೆ ಈ ಸಮಾವೇಶದಲ್ಲಿ ಪ್ರಮುಖವಾಗಿ ಚರ್ಚೆಗಳು ನಡೆಯಲಿವೆ. ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು ಈ ಸಮಾವೇಶದ ಭಾಗವಾಗಲು ಒಪ್ಪಿಕೊಂಡಿದ್ದಾರೆ.
“ನಾವು ಈ ಸಮಾವೇಶದಲ್ಲಿ ಹಿಮಾಲಯ ರಾಜ್ಯಗಳ ಸಮಸ್ಯೆಗಳನ್ನು ಪರಿಹರಿಸುವತ್ತ ಗಮನ ಹರಿಸಲಿದ್ದೇವೆ. ಭವಿಷ್ಯದಲ್ಲಿ ಹಿಮಾಲಯ ರಾಜ್ಯಗಳಿಗೆ ಆರ್ಥಿಕ ಸಂಪನ್ಮೂಲಗಳನ್ನು ಲಭ್ಯವಾಗುವಂತೆ ಮಾಡಲು ಈ ಸಮಾವೇಶ ನೆರವಾಗಬಹುದು” ಎಂದು ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹೇಳಿದ್ದಾರೆ.
ಜಾಗತಿಕ ತಾಪಮಾನ ಏರಿಕೆಯ ನಡುವೆ ಹಿಮಾಲಯದ ಪರಿಸರವನ್ನು ರಕ್ಷಣೆ ಮಾಡಬೇಕಿದೆ, ಅಭಿವೃದ್ಧಿಯ ಪ್ರಯೋಜನಗಳನ್ನು ಇಲ್ಲಿನ ಜನರಿಗೆ ವಿಸ್ತರಿಸಬೇಕಾಗಿದೆ. ಈ ಅಜೆಂಡಾವನ್ನು ಪ್ರಮುಖವಾಗಿ ಮುಂದಿಟ್ಟುಕೊಂಡು ಸಮಾವೇಶ ಜರುಗಲಿದೆ. ಆರ್ಥಿಕತೆಯನ್ನು ಮೇಲ್ದರ್ಜೆಗೇರಿಸಲು ಹಿಮಾಲಯದ ಸಂಪನ್ಮೂಲಗಳನ್ನು ಹೇಗೆ ಬಳಸಿಕೊಳ್ಳಬಹುದು ಎಂಬುದರ ಬಗ್ಗೆಯೂ ಗಂಭೀರವಾದ ಚರ್ಚೆಯನ್ನೂ ಇಲ್ಲಿ ನಡೆಸಲಾಗುತ್ತದೆ. ಜೊತೆಗೆ, ಉದ್ಯೋಗ ಮತ್ತು ವಲಸೆಯಂತಹ ವಿಷಯಗಳನ್ನು ಸಮ್ಮೇಳನದಲ್ಲಿ ಚರ್ಚಿಸಲಾಗುತ್ತಿದೆ. ಎಲ್ಲಾ ಹಿಮಾಲಯ ರಾಜ್ಯಗಳ ಗಡಿಗಳು ಇತರ ದೇಶಗಳೊಂದಿಗೆ ಸಂಪರ್ಕಿತಗೊಂಡಿವೆ. ಹೀಗಾಗಿ ಈ ರಾಜ್ಯಗಳಿಗೆ ಹೆಚ್ಚಿನ ಆದ್ಯತೆಯನ್ನು ಅವಶ್ಯಕವಾಗಿ ನೀಡಬೇಕಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.