ನವದೆಹಲಿ: ಭಾರತದ ಬಾಹ್ಯಾಕಾಶ ಕನಸಿಗೆ ಇಂಬು ನೀಡುವ ಸಲುವಾಗಿ ರಷ್ಯಾವು ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಗೆ ಅತೀ ಪ್ರಮುಖವಾದ ತಂತ್ರಜ್ಞಾನವನ್ನು ವರ್ಗಾವಣೆ ಮಾಡುತ್ತಿದೆ. ಈ ತಂತ್ರಜ್ಞಾನವು ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಯೋಜನೆಗೆ ಸಹಾಯ ಮಾಡಲಿದೆ.
ರಷ್ಯಾವು ಗಗನಯಾನ ಯೋಜನೆಯಲ್ಲಿ ಭಾರತದೊಂದಿಗೆ ಸಹಭಾಗಿತ್ವ ವಹಿಸಲಿದೆ, ಮಾತ್ರವಲ್ಲದೇ, ಪ್ರತಿಷ್ಠಿತ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್ಎಸ್) ದಲ್ಲಿ ಭಾರತವು ಉಪಸ್ಥಿತಿಯನ್ನು ಸಾಧಿಸಲೂ ರಷ್ಯಾದ ಜಂಟಿ ಸಹಭಾಗಿತ್ವ ಸಹಕಾರಿಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಜುಲೈ 11 ರಂದು ರಷ್ಯಾದ ಮಾಜಿ ಉಪ ಪ್ರಧಾನಿ ಮತ್ತು ರಷ್ಯಾದ ಬಾಹ್ಯಾಕಾಶ ಏಜೆನ್ಸಿಯ ಈಗಿನ ಮುಖ್ಯಸ್ಥ ರೋಸ್ಕೋಸ್ಮೋಸ್, ಡಿಮಿಟ್ರಿ ರೋಗೊಜಿನ್ರನ್ನು ಭೇಟಿಯಾಗಿದ್ದು, ಈ ವೇಳೆ ಉಭಯ ಮುಖಂಡರ ನಡುವೆ ಬಾಹ್ಯಾಕಾಶ ವಿಜ್ಞಾನ ಮತ್ತು ಸಂಶೋಧನೆ ವಿಷಯದಲ್ಲಿ ಉಭಯ ರಾಷ್ಟ್ರಗಳ ಸಹಯೋಗದ ಬಗ್ಗೆ ಚರ್ಚೆ ನಡೆದಿವೆ.
2022ರಲ್ಲಿ ಮೂರು ಭಾರತೀಯ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಗಗನಯಾನ ಮಿಷನ್ನ ಯೋಜನೆಗಳನ್ನು ಅಂತಿಮಗೊಳಿಸಲು ಉಭಯ ರಾಷ್ಟ್ರಗಳ ಬಾಹ್ಯಾಕಾಶ ಏಜೆನ್ಸಿಗಳು ನಿರಂತರವಾಗಿ ಸಂಪರ್ಕದಲ್ಲಿದ್ದು, ಪರಸ್ಪರ ಸಹಕರಿಸುತ್ತಿವೆ.
ಬಾಹ್ಯಾಕಾಶ ತಂತ್ರಜ್ಞಾನದ ಜಾಗತಿಕ ಪ್ರವರ್ತಕ ರಾಷ್ಟ್ರಗಳಲ್ಲಿ ಒಂದಾದ ರಷ್ಯಾವು, ಭಾರತದ ಮೊದಲ ಮಾನವ ಹಾರಾಟದ ಬಾಹ್ಯಾಕಾಶ ಯೋಜನೆಗೆ ಎಲ್ಲಾ ರೀತಿಯ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದೆ. ಈ ಯೋಜನೆಗಾಗಿ ಭಾರತೀಯ ಗಗನಯಾತ್ರಿಗಳಿಗೆ ತರಬೇತಿ ನೀಡಲು ರಷ್ಯಾ ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.