ಲಕ್ನೋ: ದೇಶದಲ್ಲಿ ನಡೆಯುತ್ತಿರುವ ಗುಂಪು ಹಲ್ಲೆಗಳಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಜಮಾತ್ ಇ ಉಲೇಮಾದ ಪ್ರಮುಖ ಇಸ್ಲಾಮಿಕ್ ಸೆಮಿನರಿಯೊಬ್ಬರು ಆರೋಪಿಸಿದ್ದಾರೆ.
“ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಗುಂಪು ಹಲ್ಲೆ ಪ್ರಕರಣಗಳಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಹೊರತು, ಆಡಳಿತರೂಢ ಬಿಜೆಪಿ ಪಕ್ಷವಲ್ಲ” ಎಂದು ಜಮಾತ್ ಇ ಉಲೇಮಾ ಹಿಂದ್ ಅಧ್ಯಕ್ಷ ಮೌಲಾನಾ ಸುಹೇಬ್ ಖಾಸ್ಮಿ ಆರೋಪಿಸಿದ್ದಾರೆ.
ಲಕ್ನೋದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಒಂದು ವೇಳೆ ಉನ್ನತ ಮಟ್ಟದ ತನಿಖೆಯನ್ನು ಕೈಗೊಂಡರೆ, ಸತ್ಯ ಹೊರಬರಲಿದೆ” ಎಂದಿದ್ದಾರೆ.
ಇನ್ನೊಂದೆಡೆ, ಗುಂಪು ಹಲ್ಲೆ ಪ್ರಕರಣಗಳನ್ನು ಉತ್ತರಪ್ರದೇಶದ ಕಾನೂನು ಆಯೋಗವು ಗಂಭೀರವಾಗಿ ಪರಿಗಣಿಸಿದ್ದು, ಇಂತಹ ಪ್ರಕರಣಗಳಲ್ಲಿ ಭಾಗಿಯಾಗುವವರಿಗೆ ಮರಣದಂಡನೆಯನ್ನು ವಿಧಿಸುವಂತೆ ಯೋಗಿ ಆದಿತ್ಯನಾಥ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.
‘ದೇಶದಲ್ಲಿ ಗುಂಪು ಹಲ್ಲೆ ಪ್ರಕರಂಣಗಳು ಹೆಚ್ಚುತ್ತಿವೆ. ಆಯೋಗವು ಇದರ ಬಗ್ಗೆ ಅಧ್ಯಯನ ನಡೆಸಿ, ಸಿಎಂಗೆ ವರದಿಯನ್ನು ಸಲ್ಲಿಸಿದೆ. ಇಂತಹ ಘಟನೆಗಳು ನಡೆಯದಂತೆ ತಡೆಯುವುದು ಹೇಗೆ ಮತ್ತು ಅಪರಾಧಿಗಳಿಗೆ ಶಿಕ್ಷೆ ನೀಡುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಿದೆ” ಎಂದು ರಾಜ್ಯ ಕಾನೂನು ಆಯೋಗದ ಮುಖ್ಯಸ್ಥ ಎ.ಎನ್ ಮಿತ್ತಲ್ ಹೇಳಿದ್ದಾರೆ.
ಗುಂಪು ಹಲ್ಲೆ ಘಟನೆಗಳಲ್ಲಿ ಒಂದು ವೇಳೆ ಸಂತ್ರಸ್ಥ ಸಾವನ್ನಪ್ಪಿದರೆ ಅಪರಾಧ ಎಸಗಿದವರಿಗೆ ಜೀವಾವಧಿ ಶಿಕ್ಷೆ ಮತ್ತು ಭಾರಿ ದಂಡವನ್ನು ವರದಿಯಲ್ಲಿ ಶಿಫಾರಸು ಮಾಡಲಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.