ನವದೆಹಲಿ: ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿದ್ದ ಆಚಾರ್ಯ ದೇವವ್ರತ್ ಅವರು ಸೋಮವಾರ ವರ್ಗಾವಣೆಗೊಂಡಿದ್ದು, ಗುಜರಾತ್ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಬಿಜೆಪಿಯ ಹಿರಿಯ ಮುಖಂಡ ಕಲ್ರಾಜ್ ಮಿಶ್ರಾ ಅವರು ಹಿಮಾಚಲಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈ ಬದಲಾವಣೆಗಳನ್ನು ಮಾಡಿದ್ದು, ಗುಜರಾತ್ ರಾಜ್ಯಪಾಲರಾಗಿ ದೇವವ್ರತ್ ನೇಮಕವಾಗಿದ್ದಾರೆ ಎಂದು ಘೋಷಿಸಿದ್ದಾರೆ. ಹಿಮಾಚಲ ಪ್ರದೇಶ ರಾಜ್ಯಪಾಲರಾಗಿ ಕಲ್ರಾಜ್ ಮಿಶ್ರಾ ನೇಮಕವಾಗಿದ್ದಾರೆ ಎಂದು ಘೋಷಿಸಿದ್ದಾರೆ. ಕಛೇರಿಯನ್ನು ಅಲಂಕರಿಸಿದ ದಿನದಿಂದ ಇವರ ಅಧಿಕಾರಾವಧಿ ಆರಂಭವಾಗಲಿದೆ.
2015 ರ ಆಗಸ್ಟ್ನಲ್ಲಿ ಮೊದಲ ಬಾರಿಗೆ ಹಿಮಾಚಲಪ್ರದೇಶ ರಾಜ್ಯಪಾಲರಾಗಿ ದೇವವ್ರತ್ ನೇಮಕಗೊಂಡರು, ಅವರು ಆ ರಾಜ್ಯದಲ್ಲಿನ ಮಾದಕ ದ್ರವ್ಯ ಸೇವನೆ ಸೇರಿದಂತೆ ಹಲವಾರು ಸಾಮಾಜಿಕ ದುಷ್ಕೃತ್ಯಗಳ ವಿರುದ್ಧ ಕ್ರಮಗಳನ್ನು ಕೈಗೊಂಡ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿಶೇಷವೆಂದರೆ, ಅಧ್ಯಕ್ಷ ಕೋವಿಂದ್ ಅವರು ಬಿಹಾರ ರಾಜ್ಯಪಾಲರಾಗಿ ನೇಮಕ ಆಗಿದ್ದ ದಿನವೇ ಇವರನ್ನು ಹಿಮಾಚಲ ರಾಜ್ಯಪಾಲರಾಗಿ ನೇಮಿಸಲಾಗಿತ್ತು.
ಕಲ್ರಾಜ್ ಮಿಶ್ರಾ ಅವರು ಈ ಹಿಂದೆ ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 2019ರಲ್ಲಿ ಇವರು ಚುನಾವಣೆಗೆ ಸ್ಪರ್ಧಿಸಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.