ನಾಗ್ಪುರ: ಭಾರತದಲ್ಲಿನ ಜರ್ಮನ್ ರಾಯಭಾರಿ ವಾಲ್ಟರ್ ಜೆ ಲಿಂಡ್ನರ್ ಅವರು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಚೇರಿಗೆ ಬುಧವಾರ ಭೇಟಿ ನೀಡಿದರು. ಈ ವೇಳೆ ಅವರು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
“ನಾಗ್ಪುರದ ಆರ್ಎಸ್ಎಸ್ ಪ್ರಧಾನ ಕಛೇರಿಗೆ ಭೇಟಿ ಮತ್ತು ಸರಸಂಘಚಾಲಕ ಡಾ.ಮೋಹನ್ ಭಾಗವತ್ ಅವರೊಂದಿಗೆ ಸುದೀರ್ಘ ಸಭೆ” ಎಂದು ಜರ್ಮನ್ ರಾಯಭಾರಿ ವಾಲ್ಟರ್ ಜೆ ಲಿಂಡ್ನರ್ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ.
“ಆರ್ಎಸ್ಎಸ್ 1925ರಲ್ಲಿ ಸ್ಥಾಪನೆಯಾದ ವಿಶ್ವದ ಅತೀದೊಡ್ಡ ಸ್ವಯಂಸೇವಕ ಸಂಘಟನೆಯಾಗಿದೆ” ಎಂದಿದ್ದಾರೆ.
ವಾಲ್ಟರ್ ಜೆ ಲಿಂಡ್ನರ್ ಈ ವರ್ಷದ ಮೇ ತಿಂಗಳಲ್ಲಿ ಭಾರತದಲ್ಲಿನ ಜರ್ಮನ್ ರಾಯಭಾರಿಯಾಗಿ ಅಧಿಕಾರ ವಹಿಸಿಕೊಂಡರು.
Visit of Headquarters of RSS (Rashtriya Swayamsevak Sangh) in Nagpur and long meeting with its Sarsanghchalak (Chief) Dr Mohan Bhagwat. Founded 1925, it is world’s largest voluntary organization – though not uncontroversialy perceived throughout its history… pic.twitter.com/B5cFUpw1ml
— Walter J. Lindner (@AmbLindnerIndia) July 17, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.