ನವದೆಹಲಿ: ಕ್ರೀಡಾ ಕ್ಷೇತ್ರದಲ್ಲಿ ಅಮೋಘ ಸಾಧನೆಗೈದ ಭಾರತೀಯ ಕ್ರೀಡಾಪಟುಗಳಾದ ಸ್ಮೃತಿ ಮಂಧನಾ ಮತ್ತು ರೋಹನ್ ಬೋಪಣ್ಣ ಅವರಿಗೆ ನಿನ್ನೆ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಯನ್ನು ನೀಡಿದ ಪುರಸ್ಕರಿಸಲಾಯಿತು. ನವದೆಹಲಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಕಿರಣ್ ರಿಜ್ಜು ಅವರು ಪ್ರಶಸ್ತಿಗಳನ್ನು ಪ್ರದಾನಿಸಿದರು.
ಕ್ರಿಕೆಟ್ನಲ್ಲಿ ದೊಡ್ಡ ಸಾಧನೆ ಮಾಡಿದ್ದಕ್ಕಾಗಿ ಸ್ಮೃತಿ ಮಂಧನಾ ಮತ್ತು ಟೆನಿಸ್ನಲ್ಲಿ ಸಾಧನೆ ಮಾಡಿದ್ದಕ್ಕಾಗಿ ರೋಹನ್ ಬೋಪಣ್ಣ ಅವರಿಗೆ 2018ರ ಸಾಲಿನ ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. 2018ರ ಅವರು ಸೆಪ್ಟೆಂಬರ್ 25ರಂದು ಅವರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿಯಿಂದ ಅರ್ಜುನ ಪ್ರಶಸ್ತಿಗಳನ್ನು ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಆ ಸಮಯದಲ್ಲಿ ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಸಲುವಾಗಿ ಅವರು ವಿದೇಶದಲ್ಲಿದ್ದರು. ಹೀಗಾಗಿ ಅವರಿಗೆ ನಿನ್ನೆ ಪ್ರಶಸ್ತಿಯನ್ನು ಪ್ರದಾನಿಸಲಾಗಿದೆ.
ಎಲ್ಲಾ ಫಾರ್ಮೆಟ್ನ ಕ್ರಿಕೆಟ್ಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ಅತ್ಯುತ್ತಮ ಮಹಿಳಾ ಕ್ರಿಕೆಟಿಗರಲ್ಲಿ ಸ್ಮೃತಿ ಮಂಧನಾ ಕೂಡ ಒಬ್ಬರು. ಏಕದಿನ ಪಂದ್ಯದಲ್ಲಿ ದ್ವಿ-ಶತಕ ಗಳಿಸಿದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆ ಅವರದ್ದು. 2016 ರ ಐಸಿಸಿ ಮಹಿಳಾ ತಂಡದಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಆಟಗಾರ್ತಿ. 2017-18ನೇ ಸಾಲಿನಲ್ಲಿ ಬಿಸಿಸಿಐ ಅವರಿಗೆ ಅತ್ಯುತ್ತಮ ಅಂತಾರಾಷ್ಟ್ರೀಯ ಕ್ರಿಕೆಟಿಗ (ಮಹಿಳಾ) ಪ್ರಶಸ್ತಿ ನೀಡಿತ್ತು.
ಪ್ರತಿಯೊಬ್ಬ ಭಾರತೀಯರಿಗೂ ತಿಳಿದಿರುವಂತೆ, ರೋಹನ್ ಬೋಪಣ್ಣ ದೇಶದ ಅತ್ಯುತ್ತಮ ಟೆನಿಸ್ ಆಟಗಾರರಲ್ಲಿ ಒಬ್ಬರು. ಅವರು ಏಷ್ಯನ್ ಗೇಮ್ಸ್ 2018 ರಲ್ಲಿ ಪುರುಷರ ಡಬಲ್ಸ್ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ ಮತ್ತು 2017 ರಲ್ಲಿ ಮಿಕ್ಸ್ಡ್ ಡಬಲ್ಸ್ನಲ್ಲಿ ಗ್ರ್ಯಾಂಡ್ ಸ್ಲ್ಯಾಮ್ (ಫ್ರೆಂಚ್ ಓಪನ್) ಪ್ರಶಸ್ತಿಯನ್ನು ಗೆದ್ದ ನಾಲ್ಕನೇ ಭಾರತೀಯ ಆಟಗಾರರಾಗಿದ್ದಾರೆ.
Shri @KirenRijiju, Minister YAS, presented #ArjunaAwards to the ace Indian women cricketer @mandhana_smriti and star tennis player @rohanbopanna for the year 2018 today at New Delhi. Congratulations to you both! 🎉👏👏 pic.twitter.com/C9LGHgrtVr
— Dept of Sports MYAS (@IndiaSports) July 16, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.