ನವದೆಹಲಿ: ದೇಶದ ಎರಡನೇ ಅತಿದೊಡ್ಡ ಸಾಫ್ಟ್ವೇರ್ ಸರ್ವಿಸ್ ಕಂಪನಿ ಇನ್ಫೋಸಿಸ್ನ ಸಹ-ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಅವರಿಗೆ ಲಂಡನ್ನ ಸಾರ್ವಜನಿಕ ಸಂಶೋಧನಾ ವಿಶ್ವವಿದ್ಯಾಲಯ ಮತ್ತು ಫೆಡರಲ್ ವಿಶ್ವವಿದ್ಯಾಲಯ ಕಾಲೇಜು ರಾಯಲ್ ಹಾಲೊವೇ ಡಾಕ್ಟರ್ ಆಫ್ ಸೈನ್ಸ್ (ಹಾನರಿಸ್ ಕಾಸಾ) ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಿದೆ. ಕಂಪ್ಯೂಟರ್ ಸೈನ್ಸ್ ಕ್ಷೇತ್ರಕ್ಕೆ ಅವರು ನೀಡಿದ ಅತ್ಯುತ್ತಮ ಕೊಡುಗೆಗಾಗಿ, ಭಾರತದಲ್ಲಿ ಮತ್ತು ಜಾಗತಿಕ ವೇದಿಕೆಯಲ್ಲಿ ಅವರು ಪ್ರತಿನಿಧಿಸುತ್ತಿರುವ ಆದರ್ಶಕ್ಕಾಗಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ.
ಸರ್ರೆಯ ಎಗ್ಹ್ಯಾಮ್ನಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಪದವಿಯನ್ನು ಪ್ರದಾನ ಮಾಡಲಾಯಿತು. ಈ ವೇಳೆ ನಾರಾಯಣ ಮೂರ್ತಿ ಅವರಿಗೆ ಪದವಿಪೂರ್ವ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣಪತ್ರಗಳನ್ನು ಪಡೆದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿಗಳು ಸಾಥ್ ನೀಡಿದರು.
ಎನ್.ಆರ್.ನಾರಾಯಣ ಮೂರ್ತಿ, ನಂದನ್ ನಿಲೇಕಣಿ, ಕ್ರಿಸ್ ಗೋಪಾಲಕೃಷ್ಣನ್, ಎಸ್.ಡಿ. ಶಿಬುಲಾಲ್ ಮತ್ತು ಕೆ ದಿನೇಶ್ ಅವರು ಜಂಟಿಯಾಗಿ ಸ್ಥಾಪನೆ ಮಾಡಿರುವ ಇನ್ಫೋಸಿಸ್ ಇಂದು ಜಾಗತಿಕವಾಗಿ 70,000 ಜನರಿಗೆ ಉದ್ಯೋಗ ನೀಡುತ್ತಿದೆ.
ಪ್ರಸ್ತುತ ನಾರಾಯಣ ಮೂರ್ತಿ ಅವರು, ಫೋರ್ಡ್ ಫೌಂಡೇಶನ್ ಬೋರ್ಡ್ ಆಫ್ ಟ್ರಸ್ಟೀಸ್ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಯುನೈಟೆಡ್ ನೇಷನ್ಸ್ ಫೌಂಡೇಶನ್, ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡಿ ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ನಲ್ಲೂ ಅವರು ಸೇವೆಯನ್ನು ಸಲ್ಲಿಸುತ್ತಿದ್ದಾರೆ.
ಅವರು ಪಬ್ಲಿಕ್ ಹೆಲ್ತ್ ಫೌಂಡೇಶನ್ ಆಫ್ ಇಂಡಿಯಾದ ಆಡಳಿತ ಮಂಡಳಿಗಳ ಅಧ್ಯಕ್ಷರಾಗಿದ್ದಾರೆ, ಕಾರ್ನೆಲ್ ವಿಶ್ವವಿದ್ಯಾಲಯದ ಅಧ್ಯಕ್ಷೀಯ ಕೌನ್ಸಿಲರ್ ಮತ್ತು ಹೋಬರ್ ಮಾರ್ಲೊ ಟ್ರಸ್ಟ್ನ ಫಲಾನುಭವಿಯೂ ಆಗಿದ್ದಾರೆ.
ಅವರ ಪ್ರಶಸ್ತಿಯ ಕುರಿತು ಮಾತನಾಡಿದ ಅವರು, “ಈ ಪ್ರಶಸ್ತಿಯನ್ನು ಸ್ವೀಕರಿಸುವುದು ಒಂದು ದೊಡ್ಡ ಭಾಗ್ಯ ಮತ್ತು ನನ್ನನ್ನು ಗುರುತಿಸಿದ್ದಕ್ಕಾಗಿ ರಾಯಲ್ ಹಾಲೊವೇಗೆ ನಾನು ಆಭಾರಿಯಾಗಿದ್ದೇನೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.