ನವದೆಹಲಿ: ಮಧ್ಯಪ್ರದೇಶ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ನಾಗಾಲ್ಯಾಂಡ್ ಮತ್ತು ತ್ರಿಪುರ ರಾಜ್ಯಗಳಿಗೆ ಆರು ಹೊಸ ರಾಜ್ಯಪಾಲರನ್ನು ಕೇಂದ್ರ ಶನಿವಾರ ನೇಮಿಸಿದೆ.
ಮಧ್ಯಪ್ರದೇಶದ ರಾಜ್ಯಪಾಲೆ ಮತ್ತು ಗುಜರಾತ್ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರನ್ನು ಉತ್ತರಪ್ರದೇಶ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಬಿಹಾರ ರಾಜ್ಯಪಾಲ ಲಾಲ್ಜಿ ಟಂಡನ್ ಅವರನ್ನು ವರ್ಗಾಯಿಸಿ ಮಧ್ಯಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
ಕೇಸರಿನಾಥ್ ತ್ರಿಪಾಠಿ ಅವರ ಸ್ಥಾನವನ್ನು ರಿಪ್ಲೇಸ್ ಮಾಡಿ, ಹಿರಿಯ ಸುಪ್ರೀಂ ಕೋರ್ಟ್ ವಕೀಲ ಜಗದೀಪ್ ಧಂಕರ್ ಅವರನ್ನು ಪಶ್ಚಿಮ ಬಂಗಾಳದ ಹೊಸ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಕಪ್ತಾನ್ ಸಿಂಗ್ ಸೋಲಂಕಿ ಅವರ ಬದಲಿಗೆ ಬಿಜೆಪಿ ಸದಸ್ಯ ರಮೇಶ್ ಬೈಸ್ ಅವರನ್ನು ತ್ರಿಪುರದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
ಬಿಜೆಪಿ ಶಾಸಕ ಫಾಗು ಚೌಹಾಣ್ ಅವರನ್ನು ಬಿಹಾರ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದ್ದು, ಪದ್ಮನಾಭ ಆಚಾರ್ಯರ ಬದಲಿಗೆ ನಾಗಾಲ್ಯಾಂಡ್ ರಾಜ್ಯಪಾಲರಾಗಿ ಆರ್.ಎನ್.ರವಿ ಅವರನ್ನು ನೇಮಕ ಮಾಡಲಾಗಿದೆ.
“ಮೇಲಿನ ನೇಮಕಾತಿಗಳು ಆಯಾ ಕಚೇರಿಗಳ ಉಸ್ತುವಾರಿ ವಹಿಸಿಕೊಳ್ಳುವ ದಿನಾಂಕಗಳಿಂದ ಜಾರಿಗೆ ಬರಲಿವೆ” ಎಂದು ರಾಷ್ಟ್ರಪತಿ ಭವನದ ಪ್ರಕಟನೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.