ನವದೆಹಲಿ: ಸೇನಾ ತರಬೇತಿಯನ್ನು ಪಡೆಯುವ ಮಹೇಂದ್ರ ಸಿಂಗ್ ಧೋನಿ ಅವರ ಆಶಯಕ್ಕೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಅಸ್ತು ಎಂದಿದ್ದಾರೆ. ಧೋನಿ ಭಾರತೀಯ ಸೇನೆಯ ಪ್ಯಾರಚೂಟ್ ರೆಜಿಮೆಂಟ್ ಬೆಟಾಲಿಯನ್ನಲ್ಲಿ ಎರಡು ತಿಂಗಳುಗಳ ಕಾಲ ತರಬೇತಿಯನ್ನು ಪಡೆದುಕೊಳ್ಳಲಿದ್ದಾರೆ.
ಗೌರವ ಲೆಫ್ಟಿನೆಂಟ್ ಕರ್ನಲ್ ಎಂ.ಎಸ್.ಧೋನಿ ಅವರು ಪ್ಯಾರಚೂಟ್ ರೆಜಿಮೆಂಟ್ ಬೆಟಾಲಿಯನ್ನಲ್ಲಿ ತರಬೇತಿ ಪಡೆಯಲಿದ್ದು, ಕಾಶ್ಮೀರ ಕಣಿವೆಯಲ್ಲಿ ತರಬೇತಿ ಕಾರ್ಯಗಳು ಜರಗುವ ನಿರೀಕ್ಷೆ ಇದೆ. ಆದರೆ ಅವರು ಯಾವುದೇ ಕಾರ್ಯಾಚರಣೆಯ ಭಾಗವಾಗುವುದಿಲ್ಲ ಎಂದು ಸೇನೆ ಸ್ಪಷ್ಟಪಡಿಸಿದೆ.
2015ರಲ್ಲಿ ಆಗ್ರಾದಲ್ಲಿ ದೋನಿ ಅವರು ಇಲೈಟ್ ಪ್ಯಾರ ರೆಜಿಮೆಂಟ್ ತರಬೇತಿಯನ್ನು ಪಡೆದುಕೊಂಡಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತರಬೇತಿಯನ್ನು ಪಡೆದುಕೊಂಡು ಅವರು ಪ್ಯಾರಚೂಟ್ ಜಂಪ್ ಅನ್ನೂ ಮಾಡಿದ್ದಾರೆ.
ತಾನು ಎರಡು ತಿಂಗಳುಗಳ ಕಾಲ ಲಭ್ಯವಿರುವುದಿಲ್ಲ ಎಂದು ದೋನಿ ಈಗಾಗಲೇ ಬಿಸಿಸಿಐಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 2019ರ ವಿಶ್ವಕಪ್ಗೂ ಮುಂಚಿತವಾಗಿಯೇ ದೋನಿ ಈ ಬಗ್ಗೆ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ.
ಆಗಸ್ಟ್ 3 ರಿಂದ ಆರಂಭಗೊಳ್ಳಲಿರುವ ವೆಸ್ಟ್ ಇಂಡೀಸ್ ಕ್ರಿಕೆಟ್ ಪಂದ್ಯಾವಳಿಗಳಿಗೆ ಧೋನಿಯವರನ್ನು ಆಯ್ಕೆ ಮಾಡಲಾಗಿಲ್ಲ.
ಧೋನಿ ಅವರಿಗೆ 2011ರಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆ ನೀಡಲಾಗಿತ್ತು. ಈ ಕರ್ನಲ್ ಗೌರವ ಹುದ್ದೆ ಟೆರಿಟೋರಿಯಲ್ ಆರ್ಮಿಯ 106ನೇ ಇನ್ಫ್ಯಾಂಟ್ರಿ ಬೆಟಾಲಿಯನ್ಗೆ ಸೇರಿದ್ದಾಗಿತ್ತು. ಭಾರತೀಯ ಸೇನೆ ಹೊಂದಿರುವ ಎರಡು ಪ್ಯಾರಾಚೂಟ್ ರೆಜಿಮೆಂಟ್ಗಳು ಪೈಕಿ ಇನ್ಫ್ಯಾಂಟ್ರಿ ಬೆಟಾಲಿಯನ್ ಒಂದಾಗಿದೆ.
ವಿಶ್ವಕಪ್ ಕ್ರಿಕೆಟ್ ವೇಳೆ ಧೋನಿ ಕೀಪಿಂಗ್ ವೇಳೆ ಪ್ಯಾರಾಚೂಟ್ ರೆಜಿಮೆಂಟ್ ಬಲಿದಾನ್ ಬ್ಯಾಡ್ಜ್ ಧರಿಸಿ ಗೌರವ ಸೂಚಿಸಿದ್ದರು. ಆದರೆ ಐಸಿಸಿ ಬಿಸಿಸಿಐಗೆ ಸೂಚನೆಯ ಹಿನ್ನೆಲೆಯಲ್ಲಿ ಧೋನಿ ನಂತರದ ಪಂದ್ಯಗಳಲ್ಲಿ ಬಲಿದಾನ್ ಬ್ಯಾಡ್ಜ್ ಇರುವ ಗ್ಲೌಸ್ ಧರಿಸಿರಲಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.