ಢಾಕಾ: ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ)ಯ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ಮುಸ್ತಾಫ ಕಮಲ್ ನಿರ್ಧರಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು ‘ವಿಶ್ವಕಪ್ ಫೈನಲ್ ಪಂದ್ಯದ ಮೊದಲು ನಡೆದ ಕೆಲವೊಂದು ಘಟನಾವಳಿಗಳು ನನಗೆ ಬೇಸರ ತರಿಸಿದೆ. ನನ್ನ ರಾಜೀನಾಮೆ ಪತ್ರ ಸಿದ್ಧವಾಗಿದ್ದು ಅದನ್ನು ಶೀಘ್ರದಲ್ಲೇ ಐಸಿಸಿಗೆ ಕಳುಹಿಸಿಕೊಡುತ್ತೇನೆ. ಈಗ ನಾನು ಐಸಿಸಿಯ ಹಾಲಿ ಅಧ್ಯಕ್ಷನಲ್ಲ, ಮಾಜಿ ಅಧ್ಯಕ್ಷ’ ಎಂದಿದ್ದಾರೆ.
ಅಸವಿಂಧಾನಿಕವಾಗಿ ಕಾರ್ಯನಿರ್ವಹಿಸುವವರೊಂದಿಗೆ ಕೆಲಸ ಮಾಡುವುದು ನನ್ನಿಂದ ಸಾಧ್ಯವಿಲ್ಲ ಎನ್ನುವ ಮೂಲಕ ಅವರು ಐಸಿಸಿನ ಸದಸ್ಯರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಬಾಂಗ್ಲಾದೇಶ ಮತ್ತು ಭಾರತ ನಡುವಣ ಪಂದ್ಯದಲ್ಲಿ ಅಂಪೈರ್ಗಳು ತಪ್ಪು ನಿರ್ಧಾರ ನೀಡಿದ್ದಾರೆ ಎಂದು ಮುಸ್ತಾಫ ಆರೋಪಿಸಿದ್ದರು. ಅಲ್ಲದೇ ಬಿಸಿಸಿಐ ಮಾಜಿ ಅಧ್ಯಕ್ಷ ಎನ್.ಶ್ರೀನಿವಾಸನ್ ಅವರು ವಿಶ್ವಕಪ್ ಟ್ರೋಫಿ ಹಸ್ತಾಂತರ ಮಾಡಿದ್ದು ಮುಸ್ತಾಫ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದೇ ಕಾರಣಕ್ಕೆ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.