ಮುಂಬಯಿ: ಪ್ರಾಥಮಿಕ ವಿಷಯಗಳ ಬಗ್ಗೆ ಪಾಠ ಮಾಡದ ಮದರಸಾಗಳ ಮಾನ್ಯತೆಯನ್ನು ರದ್ದುಗೊಳಿಸಲು ಮಹಾರಾಷ್ಟ್ರದ ಬಿಜೆಪಿ ಮತ್ತು ಶಿವಸೇನಾ ಮೈತ್ರಿ ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದೆ.
‘ಇಂಗ್ಲೀಷ್, ಗಣಿತ, ವಿಜ್ಞಾನ ಮುಂತಾದ ವಿಷಯಗಳನ್ನು ಕಲಿಸದೇ ಇರುವ ಮದರಸಾಗಳು ಶಾಲೆಗಳಲ್ಲ ಮತ್ತು ಅದರಲ್ಲಿ ಕಲಿಯುತ್ತಿರುವ ಮಕ್ಕಳನ್ನು ಶಾಲೆಯಿಂದ ಹೊರಗಿರುವವರು ಎಂದು ಪರಿಗಣನೆ ಮಾಡಲಾಗುತ್ತದೆ’ ಎಂದು ಅಲ್ಲಿನ ಅಲ್ಪಸಂಖ್ಯಾತ ಸಚಿವ ಏಕನಾಥ ಖಡ್ಸೆ ತಿಳಿಸಿದ್ದಾರೆ.
ಮದರಸಾ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತದೆಯೇ ಹೊರತು, ಔಪಚಾರಿಕ ಶಿಕ್ಷಣವನ್ನು ನೀಡುತ್ತಿಲ್ಲ. ನಮ್ಮ ಸಂವಿಧಾನದಲ್ಲಿ ಹೇಳಿರುವಂತೆ ಇಲ್ಲಿ ಶಿಕ್ಷಣವನ್ನು ನೀಡಲಾಗುತ್ತಿಲ್ಲ. ಹಿಂದೂ ಮತ್ತು ಕ್ರೈಸ್ಥ ಮಕ್ಕಳು ಮದರಸಾದಲ್ಲಿ ಕಲಿಯಲು ಇಚ್ಛಿಸಿದರೆ ಅವರಿಗೆ ಇಲ್ಲಿ ಕಲಿಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಾಮಾನ್ಯ ಶಿಕ್ಷಣವನ್ನು ಇಲ್ಲಿ ನೀಡಬೇಕು, ಇಲ್ಲವಾದರೆ ಮಾನ್ಯತೆ ರದ್ದುಪಡಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.