ನವದೆಹಲಿ: ಕಾಶ್ಮೀರದ ವಿಷಯದಲ್ಲಿ ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನನಗೆ ಮನವಿ ಮಾಡಿಕೊಂಡಿದ್ದಾರೆ ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ಮೋದಿ ವಿರುದ್ಧದ ಅಸ್ತ್ರವಾಗಿ ಪ್ರಯೋಗಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ. ಇದೇ ವಿಷಯವನ್ನು ಮುಂದಿಟ್ಟುಕೊಂಡು ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ದೊಡ್ಡ ಮಟ್ಟದ ಗದ್ದಲವನ್ನು ಎಬ್ಬಿಸಿವೆ. ಇಂತಹ ಯಾವ ಮನವಿಯನ್ನೂ ಮೋದಿ ಮಾಡಿಲ್ಲ ಎಂದು ವಿದೇಶಾಂಗ ಸಚಿವರು ಸ್ಪಷ್ಟಪಡಿಸಿದರೂ ಪ್ರತಿಪಕ್ಷಗಳು ಜಗ್ಗುತ್ತಿಲ್ಲ.
ಆದರೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಸಂಸದ ಶಶಿ ತರೂರ್ ಮಾತ್ರ ಮೋದಿಯನ್ನು ಸಮರ್ಥಿಕೊಂಡಿದ್ದಾರೆ. ಪ್ರಧಾನಿ ಮೋದಿಯವರು ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆಗೆ ಮನವಿ ಮಾಡಿಕೊಳ್ಳಲು ಸಾಧ್ಯವೇ ಇಲ್ಲ ಎಂದಿದ್ದಾರೆ.
“ಟ್ರಂಪ್ ಅವರ ಹೇಳಿಕೆಯನ್ನು ನಂಬಲು ಸಾಧ್ಯವಿಲ್ಲ. ಕಾಶ್ಮೀರ ವಿಷಯದಲ್ಲಿ ಯಾರೂ ಮಧ್ಯಸ್ಥಿಕೆಯನ್ನು ವಹಿಸಬಾರದು ಎಂಬುದು ಭಾರತದ ದೃಢ ನಿಲುವಾಗಿದೆ” ಎಂದಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ತರೂರ್, “ಟ್ರಂಪ್ ಅವರಿಗೆ ತಾನು ಏನು ಹೇಳುತ್ತಿದ್ದೇನೆ ಎಂದು ಗೊತ್ತಿಲ್ಲ ಎಂದೆನಿಸುತ್ತದೆ. ಅವರಿಗೆ ಯಾರೂ ವಿವರಿಸಿಲ್ಲದೇ ಇರಬಹುದು. ಮೋದಿಯವರು ಮಧ್ಯಸ್ಥಿಕೆಗೆ ಮನವಿ ಮಾಡಿಕೊಳ್ಳಲು ಸಾಧ್ಯವೇ ಇಲ್ಲ, ಯಾಕೆಂದರೆ ಮಧ್ಯಸ್ಥಿಕೆಯನ್ನು ಯಾರೂ ವಹಿಸಬಾರದು ಎಂಬುದು ನಮ್ಮ ದೃಢ ನಿಲುವಾಗಿದೆ. ಪಾಕಿಸ್ಥಾನದೊಂದಿಗೆ ಮಾತುಕತೆ ನಡೆಸಬೇಕಾದರೆ, ನಾವದನ್ನು ನೇರವಾಗಿಯೇ ಮಾಡುತ್ತೇವೆ” ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡನಾಗಿರುವ ತರೂರ್ ಅವರ ಹೇಳಿಕೆಯೂ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರವನ್ನುಂಟು ಮಾಡಿದೆ.
S Tharoor, ex-MoS MEA: Trump doesn’t know what’s he saying. Maybe he didn’t understand the issue or nobody briefed him. Impossible that Modi will ask anyone else because it’s our clear policy that we don’t want a 3rd party mediation. If we’ve to talk to Pak,we’ll do that directly pic.twitter.com/TEUSMG0PZP
— ANI (@ANI) July 23, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.