ಮಂಗಳೂರು: ಕರಾವಳಿ ಜಿಲ್ಲೆಯಲ್ಲ್ಲಿ ವಿಶೇಷವಾಗಿ ದ.ಕ. ಜಿಲ್ಲೆಯಲ್ಲಿ ಕಳೆದ 2 ತಿಂಗಳುಗಳಿಂದ 1,147 ಡೆಂಗೆ ಪ್ರಕರಣ, 1,973 ಮಲೇರಿಯಾ ಪ್ರಕರಣ ಹಾಗೂ ಎಚ್1ಎನ್1 ನಿಂದಾಗಿ ಒಟ್ಟು 13 ಜನರು ಮೃತಪಟಿದ್ದಾರೆ. ಜಿಲ್ಲೆಯಲ್ಲಿ ಮುಂದುವರಿಯುತ್ತಿರುವ ಸಣ್ಣ ಪ್ರಮಾಣದ ಮಳೆ ಮತ್ತು ಪ್ರಖರ ಬಿಸಿಲಿನ ಹವಾಮಾನದಿಂದಾಗಿ ಸಾಂಕ್ರಾಮಿಕ ರೋಗಗಳು ಉಲ್ಬಣಗೊಂಡಿದ್ದು, ಇದನ್ನು ನಿಯಂತ್ರಿಸುವಲ್ಲಿ ಸರಕಾರ ಮತ್ತು ಆರೋಗ್ಯ ಇಲಾಖಾಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ಆರೋಪಿಸಿದೆ.
ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಆರೋಗ್ಯ ಸಚಿವ ಯು.ಟಿ.ಖಾದರ್ರವರು ಈಗ ತಮ್ಮ ಇಲಾಖಾ ಸಮಸ್ಯೆಗಳು ಬಂದಾಗ ಮತ್ತು ತನ್ನ ಸ್ವಂತ ಕ್ಷೇತ್ರದಲ್ಲಿ ಸೋಂಕು ರೋಗ ಹರಡುತ್ತಿರುವಾಗ ಮೌನಕ್ಕೆ ಶರಣಾಗುತ್ತಿರುವುದನ್ನು ಬಿಜೆಪಿ ಖಂಡಿಸಿದೆ.
ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಹೆಚ್ಚು ಆರೋಗ್ಯ ಸಿಬ್ಬಂದಿಗಳನ್ನು ಕಳುಹಿಸಿ ರೋಗಗಳ ನಿಖರ ಮಾಹಿತಿ ಮತ್ತು ಪ್ರಾತ್ಯಕ್ಷಿಕೆಗಳ ಮೂಲಕ ಜನಜಾಗೃತಿ ಮಾಡಿಸಿ, ಗ್ರಾಮಾಂತರ ಆರೋಗ್ಯ ಕೇಂದ್ರಗಳಿಗೆ ಶೀಘ್ರ ಸಿಬ್ಬಂದಿಗಳ ನೇಮಕ ಮಾಡಿ ದಿನದ ೨೪ ಗಂಟೆಯೂ ಔಷಧೋಪಚಾರಗಳ ಸೇವೆಯನ್ನು ಒದಗಿಸಬೇಕೆಂದು ಜಿಲ್ಲಾ ಬಿಜೆಪಿ ರಾಜ್ಯ ಸರಕಾರವನ್ನು ಒತ್ತಾಯಿಸುತ್ತದೆ ಎಂದು ಮಾಜಿ ಶಾಸಕ, ಜಿಲ್ಲಾ ವಕ್ತಾರ ಕೆ.ಜಯರಾಮ್ ಶೆಟ್ಟಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.