ನವದೆಹಲಿ: ಲಲಿತ್ ಮೊದಿ ವಿವಾದಕ್ಕೆ ಸಂಬಂಧಿಸಿದಂತೆ ಮಳೆಗಾಲದ ಅಧಿವೇಶನಕ್ಕೆ ಕಾಂಗ್ರೆಸ್ ಧಕ್ಕೆಯುಂಟು ಮಾಡುವ ಸಾಧ್ಯತೆ ಇಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲಲತ್ ಮೋದಿ ವೀಸಾ ವಿವಾದ ಇಟ್ಟುಕೊಂಡು ಮುಂಬರುವ ಮಳೆಗಾಲದ ಅಧಿವೇಶನಕ್ಕೆ ಅಡ್ಡಿಯುಂಟು ಮಾಡುವ ಬೆದರಿಕೆಯನ್ನು ಕಾಂಗ್ರೆಸ್ ಹಾಕಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜೇಟಲಿ, ‘ಕೆಲವರು ಟಿ.ವಿ ಚಾನೆಲ್ಗಳಿಗೆ ಮಾತ್ರ ಪ್ರಸ್ತುತ ಎನಿಸುತ್ತಾರೆಯೇ ಹೊರತು ಆಡಳಿತ ಮಾಡಲು ಅಲ್ಲ’ ಎಂದಿದ್ದಾರೆ.
ಅಲ್ಲದೇ ‘ಕೆಲವು ಜನರು ಟಿ.ವಿ ಚಾನಲ್ಗಳಿಗೆ ಮಾತ್ರ ಪ್ರಸ್ತುತವಾಗಿರಬಹುದು. ಆದರೆ, ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ, ಅವರು ಆಡಳಿತಕ್ಕೆ ಪ್ರಸ್ತುತವಲ್ಲ’ ಎನ್ನುವ ಮೂಲಕ ಕಾಂಗ್ರೆಸ್ಗೆ ಟಾಂಗ್ ನೀಡಿದರು.
ಲಲಿತ್ ಮೋದಿ ವೀಸಾ ಹಗರಣವನ್ನು ಮುಂದಿಟ್ಟುಕೊಂಡಿರುವ ಕಾಂಗ್ರೆಸ್ ಪಕ್ಷವು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ರಾಜೀನಾಮೆಗೆ ಬಿಗಿ ಪಟ್ಟು ಹಿಡಿದಿದೆ. ಈ ಪಟ್ಟನ್ನು ಅಧೀವೇಶನದ ವೇಳೆಯೂ ಮುಂದುವರೆಸುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.