ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಜುಲೈ 28 ರಂದು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ತಮ್ಮ ಆಲೋಚನೆಗಳನ್ನು, ಚಿಂತನೆಗಳನ್ನು ರಾಷ್ಟ್ರದ ಜನತೆಯೊಂದಿಗೆ ಹಂಚಿಕೊಳ್ಳಲಿದ್ದಾರೆ. ಎರಡನೇ ಅವಧಿಯ ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಅವರು ನಡೆಸುತ್ತಿರುವ ಎರಡನೇ ರೇಡಿಯೋ ಕಾರ್ಯಕ್ರಮ ಇದಾಗಿದೆ.
ನರೇಂದ್ರ ಮೋದಿ ಅವರ ರೇಡಿಯೋ ಕಾರ್ಯಕ್ರಮ ಈ ಭಾನುವಾರ ಬೆಳಿಗ್ಗೆ 11 ಗಂಟೆಗೆ ಆಲ್ ಇಂಡಿಯಾ ರೇಡಿಯೋದಲ್ಲಿ ಪ್ರಸಾರವಾಗಲಿದೆ. ದೇಶ ಮತ್ತು ವಿದೇಶದ ಜನರೊಂದಿಗೆ ಅವರು ತಮ್ಮ ಚಿಂತನೆಗಳನ್ನು ಹಂಚಿಕೊಳ್ಳಲಿದ್ದಾರೆ.
ಈ ಕಾರ್ಯಕ್ರಮಕ್ಕಾಗಿ ಸಲಹೆ ಸೂಚನೆಗಳನ್ನು ಕಳುಹಿಸಿಕೊಡುವಂತೆ ಮೋದಿಯವರು ರಾಷ್ಟ್ರದ ಜನತೆಗೆ ಟ್ವಿಟರ್ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಜನರು ತಮ್ಮ ಅಭಿಪ್ರಾಯಗಳನ್ನು MyGov ಓಪನ್ ಫೋರಂನಲ್ಲಿ ಹಂಚಿಕೊಳ್ಳಬಹುದಾಗಿ ಅಥವಾ ಟೋಲ್-ಫ್ರೀ ಸಂಖ್ಯೆ 1800-11-7800 ಅನ್ನು ಡಯಲ್ ಮಾಡಿ ಪ್ರಧಾನಮಂತ್ರಿಗಳಿಗೆ ಹಿಂದಿ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಸಂದೇಶವನ್ನು ಕಳುಹಿಸಿಕೊಡಬಹುದಾಗಿದೆ.
ಪ್ರಧಾನ ಮಂತ್ರಿಯವರು ತಮ್ಮ ರೇಡಿಯೋ ಕಾರ್ಯಕ್ರಮದ ಕೊನೆಯ ಸಂಚಿಕೆಗಳಲ್ಲಿ, ಆಯುಷ್ಮಾನ್ ಭಾರತ್ ಕಾರ್ಯಕ್ರಮದ ಬಗ್ಗೆ ಮಾತನಾಡುತ್ತಾ, ಹತ್ತು ಕೋಟಿಗೂ ಹೆಚ್ಚು ದುರ್ಬಲ ಮತ್ತು ಬಡ ಕುಟುಂಬಗಳು ಈ ಯೋಜನೆಯಡಿ ಪ್ರಯೋಜನ ಪಡೆಯುತ್ತಾರೆ ಎಂದು ಹೇಳಿದರು. ಅಲ್ಲದೇ ಅನೇಕ ವಿಷಯಗಳ ಬಗ್ಗೆಯೂ ಅವರು ಅಭಿಪ್ರಾಯವನ್ನು ಹಂಚಿಕೊಂಡಿದ್ದರು.
ಮೋದಿ ಸರ್ಕಾರ 2014ರಲ್ಲಿ ಆಡಳಿತಕ್ಕೆ ಬಂದಾಗಿನಿಂದಲೂ ಪ್ರತಿ ತಿಂಗಳು ‘ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ಜನರೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಲು, ಬೆಸುಗೆಯನ್ನು ಬೆಸೆಯಲು, ಕುಂದು ಕೊರತೆಗಳನ್ನು ಆಲಿಸಲು ಈ ಕಾರ್ಯಕ್ರಮ ಉತ್ತಮ ವೇದಿಕೆಯಾಗಿ ಪರಿಣಮಿಸಿದೆ.
ಜನರೊಂದಿಗೆ ಬೆಸುಗೆಯನ್ನು ಬೆಸೆಯಲು, ಕುಂದು ಕೊರತೆಗಳನ್ನು ಆಲಿಸಲು ಈ ಕಾರ್ಯಕ್ರಮ ಉತ್ತಮ ವೇದಿಕೆಯಾಗಿ ಪರಿಣಮಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.