ಬೆಂಗಳೂರು: ಸರಕಾರ ರಚನೆಗೆ ಅವಕಾಶವನ್ನು ಪಡೆದುಕೊಂಡಿರುವುದಾಗಿ ಬಿಜೆಪಿ ಮುಖಂಡ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದು, ಇಂದು ಸಂಜೆ 6 ಗಂಟೆಗೆ ಪ್ರಮಾಣವಚನ ಸ್ವೀಕರಿಸುವುದಾಗಿ ಹೇಳಿದ್ದಾರೆ.
“ಈಗಷ್ಟೇ ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚನೆಗೆ ಅವಕಾಶವನ್ನು ಪಡೆದುಕೊಂಡಿದ್ದೇನೆ, ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕಾರ ಮಾಡುತ್ತೇನೆ. ಪ್ರಮಾಣವಚನ ಸ್ವೀಕಾರ ಸಮಾರಂಭ 6:00 ಮತ್ತು 6:15 ರ ನಡುವೆ ನಡೆಯಲಿದೆ” ಎಂದಿದ್ದಾರೆ.
ಕರ್ನಾಟಕದ ಸಿಎಂ ಆಗಿ ಈಗಾಗಲೇ ಮೂರು ಬಾರಿ ಪ್ರಮಾಣವಚನ ಸ್ವೀಕಾರ ಮಾಡಿರುವ ಬಿಎಸ್ ಯಡಿಯೂರಪ್ಪನವರು, ಇಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ನಾಲ್ಕನೆಯ ಬಾರಿಗೆ ಪ್ರಮಾಣವಚನವನ್ನು ಸ್ವೀಕಾರ ಮಾಡುತ್ತಿದ್ದಾರೆ. ರಾಜ್ಯದ 31ನೇ ಮುಖ್ಯಮಂತ್ರಿಗೆ ರಾಜ್ಯಪಾಲರಾದ ವಾಜುಬಾಯಿ ವಾಲಾ ಅವರು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.
ಬಿಜೆಪಿ ಹೈಕಮಾಂಡ್ ಸರಕಾರ ರಚನೆಗೆ ತುರ್ತು ಮಾಡುವುದು ಬೇಡ ಸ್ವಲ್ಪ ಕಾದು ನೋಡೋಣ ಎಂದು ಹೇಳಿದೆ ಎಂಬ ವರದಿಗಳು ಪ್ರಸಾರವಾಗಿದ್ದವು, ಈ ಹಿನ್ನೆಲೆಯಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದೇನೆ ಎಂಬ ಯಡಿಯೂರಪ್ಪನವರ ಹೇಳಿಕೆ ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿತ್ತು.
ನಾನು ವಿರೋಧ ಪಕ್ಷದ ನಾಯಕನಾಗಿ ಇರುವ ಕಾರಣದಿಂದ, ಪ್ರಮಾಣವಚನ ಸ್ವೀಕರಿಸುವುದಕ್ಕೂ ಮುನ್ನ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯುವುದು ಅತ್ಯಗತ್ಯವಾಗಿದೆ ಎಂದು ಯಡಿಯೂರಪ್ಪನವರು ಹೇಳಿದ್ದಾರೆ. ಪ್ರಸ್ತುತ ವಿಧಾನಸಭೆಯಲ್ಲಿ ಬಿಜೆಪಿ ಪಕ್ಷಕ್ಕೆ 105 ಸದಸ್ಯರ ಬೆಂಬಲವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.