ನವದೆಹಲಿ: ದೇಶದಲ್ಲಿ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಉತ್ತೇಜಿಸುವ ಉದ್ದೇಶದೊಂದಿಗೆ ಎಲೆಕ್ಟ್ರಿಕ್ ವೆಹ್ಹಿಕಲ್ಗಳ ಮೇಲಿನ ತೆರಿಗೆ ದರವನ್ನು ಈಗಿರುವ ಶೇಕಡಾ 12 ರಿಂದ ಶೇ. 5 ಕ್ಕೆ ಇಳಿಸಲು ಜಿಎಸ್ಟಿ ಮಂಡಳಿ ನಿರ್ಧರಿಸಿದೆ.
ಜಿಎಸ್ಟಿ ಮಂಡಳಿಯ 36 ನೇ ಸಭೆಯ ನಂತರ ಪ್ರಕಟನೆ ಬಿಡುಗಡೆಗೊಳಿಸಿರುವ ಕೇಂದ್ರ ವಿತ್ತ ಸಚಿವಾಲಯ, ಎಲೆಕ್ಟ್ರಿಕ್ ವೆಹ್ಹಿಕಲ್ಗಳ ಮೇಲಿನ ಪರಿಷ್ಕೃತ ಜಿಎಸ್ಟಿ ದರ ಆಗಸ್ಟ್ 1 ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದೆ.
ಎಲ್ಲಾ ಎಲೆಕ್ಟ್ರಿಕ್ ವೆಹ್ಹಿಕಲ್ಗಳ ಜಿಎಸ್ಟಿ ದರವನ್ನು ಶೇಕಡ 12 ರಿಂದ 5 ಕ್ಕೆ ಇಳಿಸಲಾಗಿದೆ. ಹೆಚ್ಚುವರಿಯಾಗಿ, ಎಲೆಕ್ಟ್ರಿಕ್ ವೆಹ್ಹಿಕಲ್ಗಳಿಗಾಗಿನ ಚಾರ್ಜರ್ಗಳು ಅಥವಾ ಚಾರ್ಜಿಂಗ್ ಸ್ಟೇಶನ್ಗಳ ಮೇಲಿನ ತೆರಿಗೆ ದರವನ್ನು ಶೇಕಡ 18 ರಿಂದ 5 ಕ್ಕೆ ಇಳಿಸಲಾಗಿದೆ ಎಂದಿದೆ.
ಆಗಸ್ಟ್ 1 ರಿಂದ ಎಲೆಕ್ಟ್ರಿಕ್ ಬಸ್ಸುಗಳನ್ನು (12 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸಾಗಿಸುವ ಸಾಮರ್ಥ್ಯ) ಸ್ಥಳೀಯಾಡಳಿತಗಳು ಬಾಡಿಗೆಗೆ ಪಡೆದರೆ ಅವುಗಳಿಗೆ ಜಿಎಸ್ಟಿ ವಿನಾಯಿತಿ ನೀಡಲು ಮಂಡಳಿ ಅನುಮೋದನೆ ನೀಡಿದೆ ಎಂದು ಹೇಳಿಕೆ ತಿಳಿಸಿದೆ.
ಸಭೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕೇಂದ್ರ ಹಣಕಾಸು ಸಚಿವರ ನೇತೃತ್ವವನ್ನು ಹೊಂದಿರುವ ಜಿಎಸ್ಟಿ ಕೌನ್ಸಿಲ್, ರಾಜ್ಯ ಹಣಕಾಸು ಸಚಿವರನ್ನು ಸದಸ್ಯರನ್ನಾಗಿ ಹೊಂದಿದೆ. ಇದು ಜಿಎಸ್ಟಿ ಕಾನೂನಿನ ಬದಲಾವಣೆಗಳಿಗೆ ಸಂಬಂಧಿಸಿದಂತೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ.
ತೆರಿಗೆ ಪಾವತಿಸುವ ಆಯ್ಕೆಯನ್ನು ಪಡೆಯಲು (ಸೇವೆಗಳ ವಿಶೇಷ ಪೂರೈಕೆದಾರರಿಂದ) ಫಾರ್ಮ್ ಜಿಎಸ್ಟಿ ಸಿಎಂಪಿ -02 ರಲ್ಲಿ ಮಾಹಿತಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 31 ರಿಂದ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇದಲ್ಲದೆ, ಜೂನ್ ತ್ರೈಮಾಸಿಕದಲ್ಲಿ (ಸಂಯೋಜಿತ ಯೋಜನೆಯಡಿ ತೆರಿಗೆ ಪಾವತಿದಾರರಿಂದ) ಫಾರ್ಮ್ ಜಿಎಸ್ಟಿ ಸಿಎಂಪಿ -08 ರಲ್ಲಿ ಸ್ವಯಂ-ಮೌಲ್ಯಮಾಪನ ತೆರಿಗೆಯ ವಿವರಗಳನ್ನು ಒಳಗೊಂಡಿರುವ ಹೇಳಿಕೆಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಆಗಸ್ಟ್ 31 ಕ್ಕೆ ವಿಸ್ತರಿಸಲಾಗಿದೆ. ಹಿಂದಿನ ಗಡುವು ಜುಲೈ 31 ಆಗಿತ್ತು.
ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳನ್ನು ಜನಪ್ರಿಯಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಬಜೆಟ್ 2019-20ರಲ್ಲಿ, ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ತೆಗೆದುಕೊಳ್ಳುವ ಸಾಲಗಳಿಗೆ ಪಾವತಿಸುವ ಬಡ್ಡಿಗೆ ಸರ್ಕಾರವು 1.5 ಲಕ್ಷ ರೂಪಾಯಿಗಳ ಹೆಚ್ಚುವರಿ ಆದಾಯ ತೆರಿಗೆ ವಿನಾಯಿತಿ ನೀಡಿದೆ.
ಇದಲ್ಲದೆ, ದೇಶದಲ್ಲಿ ಇ-ಸಾರಿಗೆಯನ್ನು ಮತ್ತಷ್ಟು ಉತ್ತೇಜಿಸಲು ಎಲೆಕ್ಟ್ರಿಕ್ ವಾಹನಗಳ ಕೆಲವು ಭಾಗಗಳಿಗೆ ಕಸ್ಟಮ್ಸ್ ಸುಂಕ ವಿನಾಯಿತಿ ನೀಡಲಾಗಿದೆ.
FAME II ಯೋಜನೆಯಡಿ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಅಳವಡಿಸಿಕೊಳ್ಳುವುದನ್ನು ಪ್ರೋತ್ಸಾಹಿಸಲು ಕೇಂದ್ರವು 10,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಸಮ್ಮತಿಸಿದೆ, ಸರಿಯಾದ ಪ್ರೋತ್ಸಾಹ ಮತ್ತು ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಅಂತಹ ವಾಹನಗಳನ್ನು ವೇಗವಾಗಿ ಅಳವಡಿಸಿಕೊಳ್ಳುವ ಗುರಿಯನ್ನು ಹೊಂದಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.