ಶ್ರೀನಗರ: ಒಂದೆಡೆ ಜಮ್ಮು ಕಾಶ್ಮೀರದಲ್ಲಿ ಬಿಗಿ ಭದ್ರತೆಯ ನಡುವೆ ಪವಿತ್ರ ಅಮರನಾಥ ಯಾತ್ರೆ ಆರಂಭಗೊಂಡಿದೆ, ಮತ್ತೊಂದೆಡೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರು ರಾಜಾರೋಷವಾಗಿ ಫೇಸ್ಬುಕ್ ಪೇಜ್ನಲ್ಲಿ ತಮ್ಮ ಫೋಟೋಗಳನ್ನು ಅಪ್ಲೋಡ್ ಮಾಡಿದ್ದಾರೆ.
ಇತ್ತೀಚಿಗಷ್ಟೇ ಹಿಜ್ಬುಲ್ ಉಗ್ರ ಸಂಘಟನೆ ಸೇರಿದ ಕಾಶ್ಮೀರದ 11 ಮಂದಿ ಯುವಕರು ತಮ್ಮ ಗುಂಪು ಫೋಟೋವನ್ನು ತೆಗೆದು ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದ್ದಾರೆ, ಎರಡು ದಿನಗಳ ಕಾಲ ಈ ಫೋಟೋ ಫೇಸ್ಬುಕ್ನಲ್ಲಿತ್ತು, ಇದೀಗ ಅದನ್ನು ತೆಗೆದು ಹಾಕಲಾಗಿದೆ.
ಇದೊಂದು ಆತಂಕಕಾರಿ ಬೆಳವಣಿಗೆಯಾಗಿದ್ದು, ತಮ್ಮ ಅಸ್ತಿತ್ವವನ್ನು ಸ್ಪಷ್ಟಪಡಿಸಲು ಅವರು ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ಭದ್ರತಾ ಪಡೆಗಳಿಗೆ ಅಲರಾಮ್ ಬೆಲ್ ನೀಡಿದ್ದು, ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಬೇಕಾಗಿದೆ.
ಇದೀಗ ಈ ಫೇಸ್ಬುಕ್ ಪೇಜ್ನ ಸಂಪೂರ್ಣ ದಾಖಲೆಗಳನ್ನು ನೀಡುವಂತೆ ಕೇಂದ್ರೀಯ ಭದ್ರತಾ ಪಡೆಗಳು ಸಾಮಾಜಿಕ ಜಾಲತಾಣಕ್ಕೆ ಸೂಚನೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.