ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಕೊನೆಗೂ ವಿಶ್ವಾಸಮತವನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆರು ತಿಂಗಳು ಯಾವುದೇ ಸಮಸ್ಯೆ ಇಲ್ಲದೇ ಅಧಿಕಾರ ನಡೆಸಬಹುದು.
105 ಶಾಸಕರು ಸರ್ಕಾರದ ಪರ ಬೆಂಬಲ ವ್ಯಕ್ತಪಡಿಸಿದ ಪರಿಣಾಮ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕೃತವಾಗಿ ಕರ್ನಾಟಕದ ಆಡಳಿತದ ಗದ್ದುಗೆಯನ್ನು ಏರಿದೆ.
ವಿಧಾನಸಭೆಯಲ್ಲಿ ಇಂದು ಇದ್ದ ಒಟ್ಟು ಸಾಮರ್ಥ್ಯ 206. ಹೀಗಾಗಿ ವಿಶ್ವಾಸ ಮತ ಗೆಲ್ಲಲು ಇದ್ದ ಮ್ಯಾಜಿಕ್ ನಂಬರ್ 104 ಆಗಿತ್ತು. ಬಿಜೆಪಿ 105 ಸಂಖ್ಯೆಯನ್ನು ಹೊಂದಿತ್ತು. ಕಾಂಗ್ರೆಸ್-ಜೆಡಿಎಸ್ 100 ಸಂಖ್ಯೆಯನ್ನು ಹೊಂದಿತ್ತು. ಧ್ವನಿಮತದ ಮೂಲಕ ವಿಶ್ವಾಸಮತ ಪ್ರಸ್ತಾಪವನ್ನು ಅಂಗೀಕಾರ ಮಾಡಲಾಗಿದೆ.
ಕರ್ನಾಟಕ ವಿಧಾನಸಭೆಯ ಒಟ್ಟು ಸಂಖ್ಯಾಬಲ 224. ಆದರೆ 17 ಮಂದಿಯನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ. ಆದರೆ ಬಿಜೆಪಿಗೆ 105 ಶಾಸಕರ ಬೆಂಬಲ ಇದ್ದ ಕಾರಣ ಯಡಿಯೂರಪ್ಪನವರು ಬಹುಮತ ಸಾಬೀತು ಪರೀಕ್ಷೆಯಲ್ಲಿ ಯಶಸ್ಸನ್ನು ಕಂಡಿದ್ದಾರೆ. ಧ್ವನಿ ಮತದ ಮೂಲಕ ವಿಶ್ವಾಸಮತ ಪ್ರಸ್ತಾವನೆಯನ್ನು ಸ್ಪೀಕರ್ ರಮೇಶ್ ಕುಮಾರ್ ಅಂಗೀಕರಿಸಿದರು.
ವಿಶ್ವಾಸಮತ ಗೆದ್ದ ನಂತರ ಮಹತ್ವದ ಧನ ವಿನಿಯೋಗ ವಿಧೇಯಕವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದರು.
ವಿಶ್ವಾಸಮತವನ್ನು ಗೆದ್ದ ಪರಿಣಾಮ ಬಿಜೆಪಿಯು ಇನ್ನು ಆರು ತಿಂಗಳುಗಳ ಕಾಲ ರಾಜ್ಯದಲ್ಲಿ ಅಡೆತಡೆ ಇಲ್ಲದೆ ರಾಜ್ಯಭಾರ ಮಾಡಬಹುದಾಗಿದೆ. ಆದರೆ ಬಳಿಕ ಮತ್ತೆ ಸವಾಲುಗಳು ಎದುರಾಗುವ ಸಾಧ್ಯತೆ ಇದೆ. ಮತ್ತೆ ವಿಶ್ವಾಸಮತ ಸಾಬೀತುಪಡಿಸಬೇಕಾಗಿ ಬರಬಹುದು.
ವಿಶ್ವಾಸಮತ ಸಾಬೀತುಪಡಿಸಿದ ಬಳಿಕ ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ಅವರು ರಾಜೀನಾಮೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.