ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್)ಗಳಿಗಾಗಿ ವೈದ್ಯರು, ಸುಶ್ರೂಷಾ ಸಿಬ್ಬಂದಿ ಮತ್ತು ಪ್ಯಾರಾ ಮೆಡಿಕ್ಸ್ ತಂಡವನ್ನು ಹೊಂದಿರುವ 24 ಗಂಟೆಯ ಏರ್ ಆಂಬ್ಯುಲೆನ್ಸ್ ಸೇವೆಯನ್ನು ಶೀಘ್ರದಲ್ಲೇ ಸರ್ಕಾರ ಆರಂಭಿಸುತ್ತಿದೆ.
ಈ ಸೇವೆಗಾಗಿ ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಮಿ -17 ಹೆಲಿಕಾಪ್ಟರ್ ಅನ್ನು ಬಳಕೆ ಮಾಡಲಾಗುತ್ತಿದೆ. ಗೃಹ ಸಚಿವಾಲಯದ ಆದೇಶದಂತೆ ಜಾರ್ಖಂಡ್ನ ರಾಂಚಿಯಲ್ಲಿ ಏರ್ ಅಂಬ್ಯುಲೆನ್ಸ್ಗಳು ನಿಯೋಜನೆಗೊಳ್ಳಲಿದೆ. ಎಡಪಂಥೀಯ ಉಗ್ರವಾದ ಹೆಚ್ಚಾಗಿರುವ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸೈನಿಕರಿಗೆ ಹಾಗೂ ಎತ್ತರದ ಗಡಿ ಪೋಸ್ಟ್ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧರಿಗೆ ಈ ಸೇವೆ ಲಭ್ಯವಾಗಲಿದೆ.
ಸಂಪರ್ಕದ ಕೊರತೆ ಮತ್ತು ವೈದ್ಯಕೀಯ ಸೇವೆಗಳ ಕೊರತೆಯಿಂದಾಗಿ ತುರ್ತು ವೈದ್ಯಕೀಯ ಚಿಕಿತ್ಸೆಗಳನ್ನು ನೀಡಲು ಅಡೆತಡೆ ಎದುರಿಸುತ್ತಿರುವ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಸೈನಿಕರನ್ನು ನಿಯೋಜಿಸಲಾಗಿದೆ. ಇಂತಹ ಪ್ರದೇಶಗಳಲ್ಲಿ ಗಾಯಗೊಂಡ ಸಿಬ್ಬಂದಿಗೆ ‘ಗೋಲ್ಡನ್ ಅವರ್’ ಸಮಯದಲ್ಲಿ ಚಿಕಿತ್ಸೆಯನ್ನು ನೀಡಲು ಏರ್ ಅಂಬ್ಯುಲೆನ್ಸ್ ಸಹಾಯ ಮಾಡಲಿದೆ. ಅಲ್ಲದೇ ಈ ಸೇವೆಯನ್ನು, ದೂರದ ಗಡಿ ಪ್ರದೇಶಗಳಲ್ಲಿನ ಸಿಎಪಿಎಫ್ ಸೈನಿಕರನ್ನು ಸ್ಥಳಾಂತರಿಸಲು ಕೂಡ ಈ ಸೇವೆಯನ್ನು ಬಳಸಿಕೊಳ್ಳಬಹುದಾಗಿದೆ.
ಸಿಎಪಿಎಫ್ಗಳಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ, ಗಡಿ ಭದ್ರತಾ ಪಡೆ, ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಸಶಸ್ತ್ರ ಸೀಮಾ ಬಲ್ ಮತ್ತು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಗಳು ಸೇರಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.