ರಾಯ್ಪುರ: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯ ಬಸ್ತಾರ್ ವಿಭಾಗದಲ್ಲಿ ಸೋಮವಾರ ಹದಿನಾಲ್ಕು ನಕ್ಸಲರು ಶರಣಾಗಿದ್ದಾರೆ. ಫುಲ್ಬಾಗ್ಡಿ ಪ್ರದೇಶದಲ್ಲಿ ಜಿಲ್ಲಾ ಪೊಲೀಸ್ ಪಡೆಯ ಹಿರಿಯ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. ಈ ನಕ್ಸಲರು ಪೊಗ್ಗಭೇಜಿ ಪ್ರದೇಶದಲ್ಲಿ ಸಕ್ರಿಯರಾಗಿದ್ದರು. ಪೊಲೀಸರ ಪ್ರಕಾರ, ಶರಣಾಗತರಾದವರು ವಿವಿಧ ನಕ್ಸಲ್ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿದ್ದಾರೆ.
ಇತ್ತೀಚೆಗೆ, ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಎನ್ಕೌಂಟರಿಗೆ ಇಬ್ಬರು ನಕ್ಸಲರು ಸಾವನ್ನಪ್ಪಿದ್ದರು. ಜಿಲ್ಲೆಯ ಕಿರಾಂಡುಲ್ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಜಿಲ್ಲಾ ಮೀಸಲು ಪಡೆ – ಡಿಆರ್ಜಿ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಡಿಆರ್ಜಿಯ ತಂಡವು ಇಬ್ಬರು ನಕ್ಸಲರ ಶವಗಳ ಜೊತೆಗೆ ಎರಡು ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರೂ ನಕ್ಸಲರು ತಮ್ಮ ತಲೆಯ ಮೇಲೆ ತಲಾ 5 ಲಕ್ಷ ರೂಪಾಯಿ ಬಹುಮಾನವನ್ನು ಹೊಂದಿದ್ದರು. ಎನ್ಕೌಂಟರ್ ಸ್ಥಳದಿಂದ ಒಬ್ಬ ನಕ್ಸಲನನ್ನು ಸಹ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಅಲ್ಲದೆ, ಶುಕ್ರವಾರ ಭದ್ರತಾ ಪಡೆಗಳ ಎನ್ಕೌಂಟರಿನಲ್ಲಿ ಅತೀ ಪ್ರಮುಖ ನಕ್ಸಲನೊಬ್ಬ ಸಾವನ್ನಪ್ಪಿದ್ದಾನೆ. ಜಿಲ್ಲಾ ಮೀಸಲು ಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ದಂತೇವಾಡ ಜಿಲ್ಲೆಯ ಡಬ್ಬಾ ಅರಣ್ಯದಲ್ಲಿ ನಡೆದಿದೆ. ಪೊಲೀಸರು ಸ್ಥಳದಿಂದ ನಕ್ಸಲರ ಶವ ಮತ್ತು ಬಂದೂಕನ್ನು ವಶಪಡಿಸಿಕೊಂಡಿದ್ದಾರೆ. ಹತ್ಯೆಗೀಡಾದ ನಕ್ಸಲ್ ತನ್ನ ತಲೆಯ ಮೇಲೆ 5 ಲಕ್ಷ ರೂಪಾಯಿ ಬಹುಮಾನವನ್ನು ಹೊತ್ತುಕೊಂಡಿದ್ದ. ಪೊಲೀಸ್ ಅಧಿಕಾರಿಗಳ ಪ್ರಕಾರ, ಇತ್ತೀಚಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಡೆದ ಬಿಜೆಪಿ ಶಾಸಕ ಭೀಮಾ ಮಾಂಡವಿ ಅವರ ಹತ್ಯೆಯಲ್ಲಿ ಈತನ ಕೈವಾಡವಿತ್ತು.
ನಕ್ಸಲ್ ವಿರೋಧಿ ಕಾರ್ಯಾಚರಣೆಗಳನ್ನು ಛತ್ತೀಸ್ಗಢದಲ್ಲಿ ನಿರಂತರವಾಗಿ ಮಾಡಲಾಗುತ್ತಿದೆ. ಆದರೂ ಶರಣಾಗತರಾಗಲು ಬಯಸುವ ನಕ್ಸಲರಿಗೆ ಪುನರ್ವಸತಿ ಕಲ್ಪಿಸುವ ಭರವಸೆಯನ್ನೂ ಸರ್ಕಾರಗಳು ನೀಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.